ಬೆಂಗಳೂರು:ಇಂದು ಸಿಲಿಕಾನ್ ಸಿಟಿಯಲ್ಲಿ ಕೊವಿಡ್ಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ - ಬೆಂಗಳೂರು ಲೇಟೆಸ್ಟ್ ನ್ಯೂಸ್
ದೇಶಾದ್ಯಂತ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಂದು ಬೆಂಗಳೂರಲ್ಲಿ ಕೋವಿಡ್-19ಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ
ಸೋಂಕು ದೃಢಪಟ್ಟಿದ್ದ ಸುಮಾರು 55 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೊದಲು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ .
ಇನ್ನುಈ ರೋಗಿ ಸಂಖ್ಯೆ, ಆತ ಸಂಚಾರ ನಡೆಸಿರುವ ಕುರಿತಾದ ಮಾಹಿತಿಯನ್ನು ಆರೋಗ್ಯ ಇಲಾಖೆ ನೀಡಬೇಕಿದ್ದು, ಸದ್ಯದಲ್ಲೇ ಬಿಡುಗಡೆಯಾಗುವ ಹೆಲ್ತ್ ಬುಲೆಟಿನ್ನಲ್ಲಿ ಸಮಗ್ರ ಮಾಹಿತಿ ತಿಳಿಯಲಿದೆ.