ಬೆಂಗಳೂರು:ಸಿಲಿಕಾನ್ ಸಿಟಿಯ ಬ್ಯಾಡರಹಳ್ಳಿಯ ವಾಲ್ಮೀಕಿ ನಗರದಲ್ಲಿ ವೆಲ್ಡಿಂಗ್ ಮಾಡುತ್ತಿದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.
ವಿದ್ಯುತ್ ಶಾಕ್ನಿಂದ ವೆಲ್ಡಿಂಗ್ ಮಾಡುತ್ತಿದ್ದ ವ್ಯಕ್ತಿ ಸಾವು - man died by current Electric Shock at Byadarahalli
ಬ್ಯಾಡರಹಳ್ಳಿಯ ವಾಲ್ಮೀಕಿ ನಗರದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಮೆಟ್ಟಿಲುಗಳಿಗೆ ರೇಲಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ.
ವಿಷ್ಣುಕುಮಾರ್ ಸಾವಿಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬ್ಯಾಡರಹಳ್ಳಿಯ ಶ್ರೀವರ್ಧನ್ ಎಂಬುುವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೆಟ್ಟಿಲುಗಳಿಗೆ ವೆಲ್ಡಿಂಗ್ ಮಾಡುವಾಗ ಅದರ ಒಂದು ಭಾಗ ಆಚೆ ಬಂದು, ಬೆಸ್ಕಾಂ ಲೈನ್ ಗೆ ಟಚ್ ಆಗಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ವಿಷ್ಣುಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇದರಲ್ಲಿ ಮತ್ತೋರ್ವ ವ್ಯಕ್ತಿ ರಾಜನ್ಗೆ ಗಂಭೀರ ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಕಟ್ಟಡದ ಮಾಲೀಕರ ವಿರುದ್ಧ ಸೆಕ್ಷನ್ 304 ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.