ಬೆಂಗಳೂರು : ಕಾರು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ರಾಜಾಜಿನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಬೆಳಗ್ಗೆ 10.30ರ ಸುಮಾರಿಗೆ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿಯಾಗಿ ಪರಾರಿಯಾಗಿದೆ. ಮೃತರನ್ನು ಕೃಷ್ಣಪ್ಪ (55) ಎಂದು ಗುರುತಿಸಲಾಗಿದೆ.
Hit and Run: ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ವ್ಯಕ್ತಿ ಬಲಿ - Hit and Run
ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ಪ್ರಕಾಶ್ ನಗರದ ನಿವಾಸಿಯಾಗಿರುವ ಕೃಷ್ಣಪ್ಪ ಇಂದು ಬೆಳಗ್ಗೆ ರಾಜ್ ಕುಮಾರ್ ರಸ್ತೆ ಕಡೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನವರಂಗ್ ಸಿಗ್ನಲ್ ಬಳಿ ಕಾರು ಚಾಲಕ ಯೂಟರ್ನ್ ತೆಗೆಯುವಾಗ ಕೃಷ್ಣಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಕೃಷ್ಣಪ್ಪ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ರಾಜಾಜಿನಗರ ಸಂಚಾರ ಪೊಲೀಸರು ಪರಾರಿಯಾಗಿದ್ದ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ :ಕಾರಿನ ಡಿಕ್ಕಿ ರಭಸಕ್ಕೆ ಕಿತ್ತುಬಂದ ವಿದ್ಯುತ್ ಕಂಬ.. ಯಾವ್ ಕಂಪನಿ ಕಾರಣ್ಣಾ ಇದು.. ಅಂತಿರೋ ನೆಟ್ಟಿಗರು: ವಿಡಿಯೋ ವೈರಲ್