ಕರ್ನಾಟಕ

karnataka

ETV Bharat / state

ಮ್ಯಾಂಡೌಸ್ ಚಂಡಮಾರುತ: ಬೆಂಗಳೂರಲ್ಲಿ ಜಿಟಿಜಿಟಿ ಮಳೆ, ಬಾಗಲಕೋಟೆಯಲ್ಲಿ ಅತೀ ಕನಿಷ್ಠ ಉಷ್ಣಾಂಶ ದಾಖಲು - ಹವಾಮಾನ ವರದಿ

ಮ್ಯಾಂಡೌಸ್​ ಚಂಡಮಾರುತ (Mandous Cyclone) ಹಿನ್ನೆಲೆ ಬೆಂಗಳೂರಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದು, ನಾಳೆ ವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ ಅತೀ ಕನಿಷ್ಠ ಉಷ್ಣಾಂಶ 6.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ.

ಮ್ಯಾಂದೊಸ್ ಚಂಡಮಾರುತ
ಮ್ಯಾಂದೊಸ್ ಚಂಡಮಾರುತ

By

Published : Dec 10, 2022, 7:22 AM IST

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮ್ಯಾಂಡೌಸ್​​ ಚಂಡಮಾರುತ (Mandous Cyclone) ಹಿನ್ನೆಲೆ ಈಗಾಗಲೇ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರಲ್ಲೂ ರಾತ್ರಿಯಿಡೀ ಜಿಟಿಜಿಟಿ ಮಳೆಯಾಗಿದ್ದು, ಬೆಳಿಗ್ಗೆಯೂ ಮುಂದುವರಿದಿದೆ. ಇಂದು ದಿನಪೂರ್ತಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕಳೆದ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಬಾಗಲಕೋಟೆಯಲ್ಲಿ ಅತೀ ಕನಿಷ್ಠ ಉಷ್ಣಾಂಶ (6.6 ಡಿಗ್ರಿ ಸೆಲ್ಶಿಯಸ್) ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ನಾಳೆಯೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ. ಗರಿಷ್ಠ 23 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಶಿಯಸ್ ಇರುವ ಸಾಧ್ಯತೆಗಳಿರುತ್ತದೆ.

(ಓದಿ: 10 ಸಾವಿರ ಜನರ ಬಲಿ ಪಡೆದಿದ್ದ ಭೀಕರ ಚಂಡಮಾರುತದಲ್ಲಿ ಕಣ್ಮರೆ: 23 ವರ್ಷಗಳ ಬಳಿಕ ಕುಟುಂಬ ಸೇರಿದ 80ರ ವೃದ್ಧ!

ABOUT THE AUTHOR

...view details