ಕರ್ನಾಟಕ

karnataka

ETV Bharat / state

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಾರೀಕ್​ಗೆ ನಾಳೆ ಶಸ್ತ್ರಚಿಕಿತ್ಸೆ - etv bharat kannada

ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಶಾರೀಕ್​ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಳೆ ಶಸ್ತ್ರಚಿಕಿತ್ಸೆ ನಡೆಯಲಿದೆ.

mangalore bomb blast
ಕುಕ್ಕರ್ ಬಾಂಬ್ ಸ್ಫೋಟ

By

Published : Dec 19, 2022, 12:12 PM IST

ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಶಾರೀಕ್​ಗೆ ನಾಳೆ ಶಸ್ತ್ರಚಿಕಿತ್ಸೆ ನಡೆಯಲಿದೆ.

ಸ್ಪೋಟದ ಪರಿಣಾಮದಿಂದಾಗಿ ಶಾರೀಕ್ ಮುಖ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಕೆ.ಟಿ.ರಮೇಶ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. ಶಸ್ತ್ರಚಿಕಿತ್ಸೆ ಬಳಿಕ ಏಳೆಂಟು ದಿನಗಳಲ್ಲಿ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದ್ದು, ಎನ್ಐಎ ತನಿಖಾಧಿಕಾರಿಗಳ ತಂಡ ಆರೋಪಿಯನ್ನು ವಶಕ್ಕೆ ಪಡೆಯಲಿದೆ.

ಬಾಂಬ್ ಸ್ಫೋಟ ಪ್ರಕರಣದ ರೂವಾರಿ ಶಾರೀಕ್​ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಡಿಸೆಂಬರ್ 16ರ ರಾತ್ರಿ ಮಂಗಳೂರಿನಿಂದ ಬಿಗಿ ಭದ್ರತೆಯಲ್ಲಿ ಆಂಬುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟ ಗಾಯಗಳ ಚಿಕಿತ್ಸಾ ವಿಭಾಗದಲ್ಲಿ ಆರೋಪಿ ಶಾರೀಕ್​ಗೆ ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ:ಶಾರೀಕ್ ಉಡುಪಿಗೆ ಬಂದಿದ್ದರ ಬಗ್ಗೆ ಮಂಗಳೂರು ಪೊಲೀಸರೇ ಮಾಹಿತಿ ನೀಡುತ್ತಾರೆ: ಎಸ್​ಪಿ ಅಕ್ಷಯ್

ABOUT THE AUTHOR

...view details