ಬೆಂಗಳೂರು:ಲಕ್ಷಾಂತರ ಮೌಲ್ಯದ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಮಂಗಳೂರಿನ ರೌಡಿಶೀಟರ್ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ರೌಡಿಶೀಟರ್ ಆಸ್ಗರ್ ಆಲಿ, ದಿಲ್ ಮಯಾಗ್ರಥಿ, ಮೀನಾಬುದ್ದ ಮೊಗ್ರ, ಅನ್ವರ್ ಸದತ್, ಅಬ್ದುಲ್ ಲತೀಫ್ ಹಾಗೂ ಮೊಹಮದ್ ಹನೀಫ್ ಬಂಧಿತರು. ಇವರಿಂದ 35 ಲಕ್ಷ ಮೌಲ್ಯದ 4 ಕೆ.ಜಿ.ಚರಸ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ದಂಧೆಕೋರರು ಯುವ ಜನಾಂಗವನ್ನು ಗುರಿಯಾಗಿಸಿಕೊಂಡು ನಗರದಲ್ಲಿ ಡ್ರಗ್ಸ್ ಮಾರಾಟಕ್ಕೆ ಮುಂದಾಗಿದ್ದರು. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದ ಸಿಸಿಬಿ ಮಾದಕದ್ರವ್ಯ ವಿಭಾಗದ ಇನ್‌ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯ ನೇತೃತ್ವದ ತಂಡ ನಾಲ್ಕು ಮಂದಿ ದಂಧೆಕೋರರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದೆ.
ಬಂಧಿತ ಆರೋಪಿಗಳ ಪೈಕಿ ಆಸ್ಗರ್ ಆಲಿ ಮಂಗಳೂರು ಮೂಲದ ರೌಡಿಶೀಟರ್ ಆಗಿದ್ದು, ಈತನ ವಿರುದ್ದ ಅಪರಾಧ ಪ್ರಕರಣ ದಾಖಲಾಗಿವೆ. ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.