ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ಆರೋಗ್ಯದಲ್ಲಿ ಸ್ಥಿರ, ಹಾಲಿ, ಮಾಜಿ ಸಿಎಂಗಳಿಗೆ ಒಂದೇ ವೈದ್ಯ ತಂಡದಿಂದ ಚಿಕಿತ್ಸೆ - ಸಿದ್ಧರಾಮಯ್ಯ ಆರೋಗ್ಯದಲ್ಲಿ ಚೇತರಿಕೆ

ಕೊರೊನಾ ಹಿನ್ನಲೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡು ಬಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Siddaramaiah
Siddaramaiah

By

Published : Aug 6, 2020, 8:29 PM IST

ಬೆಂಗಳೂರು:ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ಆರೋಗ್ಯ ಮಾಹಿತಿಯಲ್ಲಿ ಈ ವಿವರ ನೀಡಲಾಗಿದ್ದು, ಸಿದ್ದರಾಮಯ್ಯ ಅವರು ಆ.3 ರಂದು ಮಣಿಪಾಲ್ ಆಸ್ಪತ್ರೆಗಳಿಗೆ ದಾಖಲಾದ ನಂತರ ಪ್ರಾಯೋಗಿಕವಾಗಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿ ಮುಂದುವರೆದಿದೆ. ಅವರು ಸಾಕಷ್ಟು ಆರೋಗ್ಯವಂತರಾಗಿದ್ದು, ಹರ್ಷಚಿತ್ತರಾಗಿದ್ದಾರೆ. ಅವರನ್ನು ನಮ್ಮ ವೈದ್ಯರ ತಂಡ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಲಾಗಿದೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡ ಇವರಿಗಿಂತ ಒಂದು ದಿನ ಮುನ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಲಿ ಹಾಗೂ ಮಾಜಿ ಸಿಎಂಗಳಿಗೆ ಒಂದೇ ವೈದ್ಯರ ತಂಡ ಕೊರೊನಾಗೆ ಚಿಕಿತ್ಸೆ ನೀಡುತ್ತಿದೆ. ಸಿದ್ದರಾಮಯ್ಯ ಜ್ವರ ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ತಪಾಸಣೆಗೆ ಒಳಗಾದ ಸಂದರ್ಭ ಕೊರೊನಾ ಇರುವುದು ದೃಢಪಟ್ಟಿತ್ತು.

ಕಳೆದ ಎರಡು ದಿನದಿಂದ ಇವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details