ಬೆಂಗಳೂರು:ಬಿಬಿಎಂಪಿ ಆಯುಕ್ತ ಸ್ಥಾನದಿಂದ ಎತ್ತಂಗಡಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕ - BBMP Commissioner Manjunath Prasad
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಆ ಸ್ಥಾನದಿಂದ ಎತ್ತಗಂಡಿ ಮಾಡಲಾಗಿತ್ತು.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ವರ್ಗಾವಣೆ
ಬಿಬಿಎಂಪಿ ಆಯುಕ್ತ ಸ್ಥಾನದಿಂದ ಮಂಜುನಾಥ್ ಪ್ರಸಾದ್ ಅವರನ್ನು ಒಂದು ವಾರದ ಹಿಂದೆ ವರ್ಗಾವಣೆ ಮಾಡಲಾಗಿತ್ತು. ಆದರೆ ಸ್ಥಳ ನಿಯೋಜನೆ ಮಾಡಿರಲಿಲ್ಲ. ಇದೀಗ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ.
ಈ ಹಿಂದೆ ಕಾರ್ಯದರ್ಶಿಯಾಗಿದ್ದ ರಾಜಕುಮಾರ್ ಖತ್ರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದ್ದು, ಜೊತೆಗೆ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ಅವರನ್ನು ಕಲಬುರ್ಗಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.