ಬೆಂಗಳೂರು:ಅಕ್ರಮ ಹಣ ವರ್ಗಾವಣೆ ಆರೋಪದಡಿ ಮಂತ್ರಿ ಗ್ರೂಪ್ ಡೆವಲಪರ್ಸ್ ಕಂಪನಿಗೆ ಸೇರಿದ 300.4 ಕೋಟಿ ರೂಪಾಯಿ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸಾರ್ವಜನಿಕರಿಗೆ ಆಕರ್ಷಕ ಬೆಲೆಯಲ್ಲಿ ಫ್ಲ್ಯಾಟ್ ನಿರ್ಮಿಸಿಕೊಡುವುದಾಗಿ ನಂಬಿಸಿ ಕಂಪನಿಯು ಗ್ರಾಹಕರಿಂದ ಕೋಟ್ಯಂತರ ರೂಪಾಯಿ ಹಣ ಪಡೆದಿತ್ತು.
ಏಳು ವರ್ಷವಾದರೂ ಫ್ಲ್ಯಾಟ್ ನಿರ್ಮಿಸದೆ ಇತರ ಉದ್ದೇಶಗಳಿಗೆ ಹಣ ವರ್ಗಾವಣೆ ಮಾಡಿದ ಗಂಭೀರ ಆರೋಪದಡಿ ಕಂಪನಿ ವಿರುದ್ಧ ಸುಬ್ರಮಣ್ಯನಗರ ಹಾಗೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇ.ಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ (ಪಿಎಂಎಲ್ಎ) ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದರು.