ಬೆಂಗಳೂರು :ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ನಗರದ ಕೆಆರ್ಪುರ ಗಡಿಯಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಕನ್ನಡ ಪರ ಸಂಘಟನೆಯ ಕಾರ್ಯಯಕರ್ತರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಮರಾಠ ನಿಗಮ ಕಿಡಿ.. ಕೆಆರ್‌ಪುರದಲ್ಲಿ ಗಡಿ ಬಂದ್ ಮಾಡಿ ಕನ್ನಡ ಪರ ಸಂಘಟನೆಯ ಪ್ರತಿಭಟನೆ - ಕರ್ನಾಟಕ ಬಂದ್
ಪ್ರತಿಭಟನೆಯಲ್ಲಿ ನೂರಾರು ಕಾರ್ಯಕತರ್ಯರು ಭಾಗಿಯಾಗಿದ್ದು, ಬಿಬಿಎಂಪಿ ಮುಂಭಾಗದಿಂದ ಜಾಥಾ ನಡೆಸಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ಬಿಬಿಎಂಪಿ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ..
ಕನ್ನಡ ಪರ ಸಂಘಟನೆಯ ಪ್ರತಿಭಟನೆ
ಇದೀಗ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕತರ್ಯರು ಭಾಗಿಯಾಗಿದ್ದು, ಬಿಬಿಎಂಪಿ ಮುಂಭಾಗದಿಂದ ಜಾಥಾ ನಡೆಸಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ಬಿಬಿಎಂಪಿ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ.
ಮರಾಠ ನಿಗಮ ರಚನೆ ಖಂಡಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಬಹುತೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಅಲ್ಲಿಯವರೆಗೂ ನಗರದ ಹಲವೆಡೆ ಪ್ರತಿಭಟನೆ ಮುಂದುವರೆಸುವುದಾಗಿ ಕನ್ನಡ ಪರ ಸಂಘಟನೆಗಳು ತಿಳಿಸಿವೆ.