ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ಎಸ್.ಆರ್. ಕಂಠಿ ಅವರ ಪತ್ನಿ ಮರಿಬಸಮ್ಮ ಕಂಠಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಸ್.ಆರ್.ಕಂಠಿ ಪತ್ನಿ ಶತಾಯುಷಿ ಮರಿಬಸಮ್ಮ ವಿಧಿವಶ: ಬಿಎಸ್ವೈ ಸಂತಾಪ
ಮಾಜಿ ಮುಖ್ಯಮಂತ್ರಿ ದಿ.ಎಸ್.ಆರ್.ಕಂಠಿ ಅವರ ಪತ್ನಿ ಮರಿಬಸಮ್ಮ ಕಂಠಿ ನಿಧನರಾಗಿದ್ದಾರೆ. ಎಸ್.ಆರ್. ಕಂಠಿ ಅವರ ರಾಜಕೀಯ ಜೀವನಕ್ಕೆ ಮರಿಬಸಮ್ಮ ಕಂಠಿ ಅವರು ದೊಡ್ಡ ಕೊಡುಗೆ ನೀಡಿದ್ದರು. ಶತಾಯುಷಿಯಾಗಿ ಅವರು ತುಂಬು ಜೀವನ ನಡೆಸಿದ್ದರು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳಾಗಿ ತಮ್ಮದೇ ಛಾಪು ಮೂಡಿಸಿದ್ದ ಎಸ್.ಆರ್.ಕಂಠಿ ಅವರು ಎಸ್. ನಿಜಲಿಂಗಪ್ಪನವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ಶೈಕ್ಷಣಿಕ ಸುಧಾರಣೆಗೆ ಗಮನಾರ್ಹ ಕೊಡುಗೆ ನೀಡಿದ್ದರು. ಹೆಣ್ಣು ಮಕ್ಕಳಿಗಾಗಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಪ್ರಾರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿ, ದಕ್ಷ ಹಾಗೂ ಪ್ರಾಮಾಣಿಕ ಸೇವೆ ಸಲ್ಲಿಸಿದರು.
ಎಸ್.ಆರ್. ಕಂಠಿ ಅವರ ರಾಜಕೀಯ ಜೀವನಕ್ಕೆ ಮರಿಬಸಮ್ಮ ಕಂಠಿ ಅವರು ದೊಡ್ಡ ಕೊಡುಗೆ ನೀಡಿದ್ದರು. ಶತಾಯುಷಿಯಾಗಿ ಅವರು ತುಂಬು ಜೀವನ ನಡೆಸಿದ್ದರು. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಮರಿಬಸಮ್ಮ ಅವರ ಅಗಲಿಕೆಯ ನೋವನ್ನು ಭರಿಸಲು ಕುಟುಂಬದವರಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಿಎಸ್ವೈ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.