ಕರ್ನಾಟಕ

karnataka

ETV Bharat / state

ಟ್ವಿಟ್ಟರ್​ ಮೂಲಕ ಸುಳಿವು: ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಅಂದರ್​ - ರೋಷನ್ ಜಮೀರ್

ವ್ಯಕ್ತಿಯೋರ್ವ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಟ್ವಿಟ್ಟರ್​ ಖಾತೆ ಮೂಲಕ ವ್ಯಕ್ತಿಯೋರ್ವರು ಪೊಲೀಸರ ಗಮನಕ್ಕೆ ತಂದಿದ್ದರು. ಈ ಮಾಹಿತಿ ಮೇರೆಗೆ ಪೂರ್ವ ವಿಭಾಗ ಪೊಲೀಸರು ಕಾರ್ಯಾಚರಣೆಗಿಳಿದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

bengaluru
ಗಾಂಜಾ ಸೇವನೆ ಮಾಡ್ತಿದ್ದ ವ್ಯಕ್ತಿ ಅಂದರ್​

By

Published : Mar 9, 2020, 8:03 PM IST

ಬೆಂಗಳೂರು:ಸಾರ್ವಜನಿಕ ವಲಯದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಯನ್ನು ಪೂರ್ವ ವಿಭಾಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರೋಷನ್ ಜಮೀರ್ ಎಂಬಾತ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿ.

ನಗರದ ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿವೋರ್ವ ಗಾಂಜಾ ಸೇವನೆ ಮಾಡುತ್ತಿದ್ದಾನೆಂದು ಟ್ವಿಟ್ಟರ್​ ಖಾತೆ ಮೂಲಕ ವ್ಯಕ್ತಿಯೋರ್ವರು ಪೊಲೀಸರ ಗಮನಕ್ಕೆ ತಂದಿದ್ದರು. ಈ ಮಾಹಿತಿ ಮೇರೆಗೆ ಪೂರ್ವ ವಿಭಾಗ ಪೊಲೀಸರು ಕಾರ್ಯಾಚರಣೆಗಿಳಿದಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿ ಗಾಂಜಾ ಖರೀದಿ ಮಾಡುತ್ತಿರುವ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ABOUT THE AUTHOR

...view details