ಕರ್ನಾಟಕ

karnataka

ETV Bharat / state

ಗಾಂಜಾ ಮಾರಾಟಗಾರರ ಬಂಧನ: ಸಿಬ್ಬಂದಿ ಕಾರ್ಯಕ್ಕೆ ಪೊಲೀಸ್ ಆಯುಕ್ತರ ಮೆಚ್ಚುಗೆ - marijuana dealers arrest in bengalore

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಸೆರೆ ಹಿಡಿದ ಬಸವನಗುಡಿ ಠಾಣಾ ಪೊಲೀಸರ ಕಾರ್ಯಕ್ಕೆ ನಗರ ಪೊಲೀಸ್​ ಕಮಿಷನರ್​ ಕಮಲ್​ ಪಂತ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

kamal panth
ಕಮಲ್ ಪಂತ್

By

Published : Mar 25, 2021, 10:49 PM IST

ಬೆಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ನಗರದ ಬಸವನಗುಡಿ ಠಾಣಾ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಸಿಮ್ಜಾದ್ ಪಾಶಾ ಹಾಗೂ ನಾಗಣ್ಣ ಬಂಧಿತ ಆರೋಪಿಗಳಾಗಿದ್ದು, ಎಪಿಎಸ್ ಕಾಲೇಜು ರಸ್ತೆಯಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಲು ಅಣಿಯಾಗಿದ್ದರು ಎನ್ನಲಾಗಿದೆ.

ಬಂಧಿತರ ಕಾರಿನಲ್ಲಿದ್ದ 35.5 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಈ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡಕ್ಕೆ ಕಮಿಷನರ್ ಕಮಲ್ ಪಂತ್ 30 ಸಾವಿರ ಬಹುಮಾನವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಪಿಸ್ತೂಲ್ ಮಾರಾಟ ಜಾಲ ಭೇದಿಸಿದ ಸಿಸಿಬಿ

ABOUT THE AUTHOR

...view details