ಕರ್ನಾಟಕ

karnataka

ಮಸ್ಕಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜು!

By

Published : Nov 6, 2020, 9:44 PM IST

ಮಸ್ಕಿ ಕ್ಷೇತ್ರದ ಉಪ ಚುನಾವಣೆ ಇನ್ನೇನು ಘೋಷಣೆಯಾಗಲಿದ್ದು, ಈಗಾಗಲೇ ರಾಜಕೀಯ ಚಟುವಟಿಕೆ ಪ್ರಾರಂಭವಾಗಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದು, ಈಗಾಗಲೇ ಇದಕ್ಕೆ ವೇದಿಕೆ ಸಜ್ಜಾಗಿದೆ ಎನ್ನಲಾಗುತ್ತಿದೆ.

ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ
ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ

ಬೆಂಗಳೂರು: ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜಾಗಿದೆ ಎನ್ನಲಾಗುತ್ತಿದೆ.

ಮಸ್ಕಿ ಕ್ಷೇತ್ರದ ಉಪ ಚುನಾವಣೆ ಇನ್ನೇನು ಘೋಷಣೆಯಾಗಲಿದ್ದು, ಈಗಾಗಲೇ ರಾಜಕೀಯ ಚಟುವಟಿಕೆ ಪ್ರಾರಂಭವಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಪ್ರತಾಪ್ ಗೌಡ ಪಾಟೀಲ್​​ಗೆ ಬಿಜೆಪಿ ಟಿಕೆಟ್ ನೀಡಲಿರುವುದರಿಂದ ಅವರ ಪ್ರತಿಸ್ಪರ್ಧಿಯಾಗಿ 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಿಂತಿದ್ದ ಬಸನಗೌಡ ಈಗ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ವಿರುದ್ಧ 213 ಅಲ್ಪ ಮತಗಳ ಅಂತರದಿಂದ ಪರಾಜಿತಗೊಂಡಿದ್ದರು.

ಇದೀಗ ತಮ್ಮ ಪ್ರತಿಸ್ಪರ್ಧಿ ಬಿಜೆಪಿ ಸೇರ್ಪಡೆಗೊಂಡಿರುವುದರಿಂದ ಈ ಬಾರಿ ಮಸ್ಕಿ ಉಪ ಚುನಾವಣೆಯಲ್ಲಿ ಬಸನಗೌಡ ಟಿಕೆಟ್ ವಂಚಿತರಾಗಲಿದ್ದಾರೆ. ಹೀಗಾಗಿ ಕಾಂಗ್ರೆಸ್​ನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈಗಾಗಲೇ ಬಸನಗೌಡ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಬ್ಬರು ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.

ಜೂನ್ 2018ರಂದು ಪರಾಜಿತ ಬಿಜೆಪಿ ಅಭ್ಯರ್ಥಿ ಬಸನಗೌಡ ಮಸ್ಕಿ ಶಾಸಕರಾಗಿ ಚುನಾಯಿತರಾಗಿದ್ದ ಪ್ರತಾಪ್ ಗೌಡ ಪಾಟೀಲ್ ವಿರುದ್ಧ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರತಾಪ್ ಗೌಡ ಪಾಟೀಲ್ ಚುನಾವಣೆಯಲ್ಲಿ ನಕಲಿ ಮತದಾನ, ಡಬಲ್ ವೋಟಿಂಗ್ ಮಾಡಿದ್ದಾರೆ ಎಂದು ಆರೋಪಿಸಿ ಬಸನಗೌಡ ಕೋರ್ಟ್ ಮೊರೆ ಹೋಗಿದ್ದರು. ಚುನಾವಣೆಯನ್ನು ಅನೂರ್ಜಿತಗೊಳಿಸಿ ಮರು ಚುನಾವಣೆ ನಡೆಸುವಂತೆ ಮನವಿ ಮಾಡಿದ್ದರು. ಬಳಿಕ ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆ ಬಸನಗೌಡ ತಮ್ಮ ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದರು.

ABOUT THE AUTHOR

...view details