ಬೆಂಗಳೂರು:ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಭೆ ಆಯೋಜಿಸಲಾಗಿದೆ. ಈ ವೇಳೆ ಸಭಿಕರು ಸಾಮಾಜಿಕ ಅಂತರವನ್ನು ಸಂಪೂರ್ಣವಾಗಿ ಗಾಳಿಗೆ ತೂರಿರುವ ದೃಶ್ಯಗಳು ಕಂಡು ಬಂದಿವೆ.
ಕುರುಬ ಸಮುದಾಯದ ಬೃಹತ್ ಸಮಾವೇಶದಲ್ಲಿ ಸಾಮಾಜಿಕ ಅಂತರ ಕಡೆಗಣನೆ - Bangalore Latest News Update
ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಭೆ ಆಯೋಜಿಸಲಾಗಿದೆ. ಈ ವೇಳೆ ಸಭಿಕರು ಸಾಮಾಜಿಕ ಅಂತರವನ್ನು ಸಂಪೂರ್ಣವಾಗಿ ಗಾಳಿಗೆ ತೂರಿರುವ ದೃಶ್ಯ ಕಂಡು ಬಂದಿದೆ.
ಕುರುಬ ಸಮುದಾಯದ ಬೃಹತ್ ಸಮಾವೇಶದಲ್ಲಿ ಸಾಮಾಜಿಕ ಅಂತರ ಕಡಗಣನೆ
ರಾಜ್ಯದ ವಿವಿಧೆಡೆಯಿಂದ ಕುರುಬ ಸಮಾಜದ ಜನಪ್ರತಿನಿಧಿಗಳು, ಸಮುದಾಯದ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಸದಸ್ಯರು ಹಾಗೂ ಸಮುದಾಯದ ಮಠಾಧೀಶರು ಸೇರಿದಂತೆ 1,500ಕ್ಕೂ ಹೆಚ್ಚು ಕುರುಬ ಜನಪ್ರತಿನಿಧಿಗಳು ಆಗಮಿಸಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಆದರೆ, ಕಾರ್ಯಕ್ರಮದ ವೇಳೆ ಯಾವುದೇ ಸಾಮಾಜಿಕ ಅಂತರವಿಲ್ಲದೆ, ಕೆಲವರು ಮಾಸ್ಕ್ ಧರಿಸದೇ ಪಾಲ್ಗೊಂಡಿದ್ದು ಕಂಡುಬಂತು.
ಕಾರ್ಯಕ್ರಮದಲ್ಲಿ ಸಚಿವ ಕೆ. ಎಸ್. ಈಶ್ವರಪ್ಪ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ಪಾಲ್ಗೊಂಡಿದ್ದಾರೆ.