ಕರ್ನಾಟಕ

karnataka

ETV Bharat / state

ಕರಾವಳಿ ಜಿಲ್ಲೆಗಳಲ್ಲಿ ಆರ್ಭಟಿಸಲಿದೆ ಮಳೆ: ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಮುಂದಿನ ಐದು ದಿನಗಳವರೆಗೂ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಉ. ಕನ್ನಡ, ದ.ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ತಜ್ಞ ಸಿ.ಎಸ್ ಪಾಟೀಲ್
ಹವಾಮಾನ ಇಲಾಖೆಯ ತಜ್ಞ ಸಿ.ಎಸ್ ಪಾಟೀಲ್

By

Published : Aug 4, 2020, 7:28 PM IST

ಬೆಂಗಳೂರು:ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೂ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಉತ್ತರ ಕನ್ನಡ, ದ.ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಆಗಸ್ಟ್ 4 ಮತ್ತು 5ರಂದು ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆಗಸ್ಟ್ 6 ರಿಂದ 8ರೊಳಗೆ ಮಳೆಯ ಪ್ರಮಾಣ ತಗ್ಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಆಗಸ್ಟ್ 4, 5, 6, 8 ರಂದು ವ್ಯಾಪಕ ಮಳೆಯಾಗಲಿದೆ.

ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 7ರಂದು ಮಲೆನಾಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಆಗಸ್ಟ್ 4 ಹಾಗೂ 5ರಂದು ಮಳೆಯಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ:

ಕರ್ನಾಟಕದ ಕರಾವಳಿಯಲ್ಲಿ ಗಾಳಿಯ ವೇಗವು ಗಂಟೆಗೆ 40ರಿಂದ 50 ಕಿ.ಮೀ ಇರುವುದರಿಂದ ಮುಂದಿನ ನಾಲ್ಕು ದಿನಗಳ ಕಾಲ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ABOUT THE AUTHOR

...view details