ಬೆಂಗಳೂರು:ಕಾಮೇಗೌಡರಂತಹ ಬೆಲೆಕಟ್ಟಲಾಗದ ಪರಿಸರ ಕಾಳಜಿಯುಳ್ಳವರ ಸಂತತಿ ಇನ್ನೂ ಹೆಚ್ಚಾಗಲಿ ಎಂದು ಆಶಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಕಾಮೇಗೌಡರಂತಹ ಪರಿಸರ ಕಾಳಜಿಯುಳ್ಳವರ ಸಂತತಿ ಇನ್ನೂ ಹೆಚ್ಚಾಗಲಿ: ಸಿಎಂ - C M B.S. Yadiyurappa
ಪರಿಸರ ಕಾಳಜಿಯುಳ್ಳ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡರಂತಹ ಸಂತತಿ ಇನ್ನೂ ಹೆಚ್ಚಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಪರಿಸರ ಕಾಳಜಿಯುಳ್ಳ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡರಿಗೆ, ಜೀವಿತಾವಧಿ ಉಚಿತ ಬಸ್ ಪಾಸ್ ನೀಡುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಕೆಎಸ್ಆರ್ಟಿಸಿ ಉಚಿತ ಬಸ್ ಪಾಸ್ ನೀಡಿದೆ.
ಮಾಧ್ಯಮವೊಂದರಲ್ಲಿ ಉಚಿತ ಬಸ್ ಪಾಸ್ ಬಗ್ಗೆ ಕಾಮೇಗೌಡರು ಅಭಿಲಾಷೆ ವ್ಯಕ್ತಪಡಿಸಿದ್ದರು. ಹೀಗಾಗಿ ಪಾಸ್ ವಿತರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿದ್ದಾಗಿ ಸಿಎಂ ತಿಳಿಸಿದ್ದಾರೆ. ಕಾಮೇಗೌಡರ ಪರಿಸರ ಸೇವೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದನ್ನು ಸಿಎಂ ಇಲ್ಲಿ ಸ್ಮರಿಸಿಕೊಂಡು ಟ್ವೀಟ್ ಮಾಡಿದ್ದಾರೆ.