ಬೆಂಗಳೂರು:ನಗರದ ಬೊಮ್ಮನಹಳ್ಳಿ ವಲಯದ ಕೆಲ ಲೇಔಟ್ಗಳಲ್ಲಿ ಮಳೆನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದ್ದ ಸುದ್ದಿ 'ಈಟಿವಿ ಭಾರತ್' ನಲ್ಲಿ ಪ್ರಸಾರವಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮೇಯರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈಟಿವಿ ಭಾರತ್ ಇಂಪ್ಯಾಕ್ಟ್... ಮಳೆಗೆ ಅಸ್ತವ್ಯಸ್ತವಾದ ಪ್ರದೇಶಗಳಿಗೆ ಮೇಯರ್ ಭೇಟಿ - ಮೇಯರ್
ಮೇಯರ್ ಗಂಗಾಂಬಿಕೆ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ಮಾಡಿ ಮುಂದೆ ಈ ರೀತಿಯ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಈಟಿವಿ ಭಾರತ್ನೊಂದಿಗೆ ಮೇಯರ್ ಗಂಗಾಂಬಿಕೆ
ಮೇಯರ್ ಗಂಗಾಂಬಿಕೆ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ಮಾಡಿ ಮುಂದೆ ಈ ರೀತಿಯ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮಳೆಗಾಲ ಶುರುವಾಗುವ ಮುನ್ನ ಅರ್ಧಕ್ಕೆ ನಿಂತಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಕ್ಕೆ ಮತ್ತೆ ಕೈ ಹಾಕಲಾಗುವುದು ಎಂದು ಸಹ ತಿಳಿಸಿದರು.