ಕರ್ನಾಟಕ

karnataka

ETV Bharat / state

ಜಿಂದಾಲ್​ಗೆ ಭೂಮಿ ವಿಚಾರ: ಎಂ.ಬಿ.ಪಾಟೀಲ್​​​​ ನೇತೃತ್ವದಲ್ಲಿ ಸಂಪುಟ ಉಪಸಮಿತಿ ಮೊದಲ ಸಭೆ! - ಜಿಂದಾಲ್​

ಸಮಿತಿ ರಚನೆಯಾದ ಬಳಿಕ ಸೋಮವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಸಭೆ ನಡೆಯಿತು. ಸಭೆಯಲ್ಲಿ ದಾಖಲೆಗಳನ್ನು ಪರಿಶೀಲಿಸಿ, ಹಲವು ಮಾಹಿತಿಯನ್ನು ಕಲೆಹಾಕಲಾಗಿದೆ. ಸಭೆಯಲ್ಲಿ ಜಿಂದಾಲ್ ಕಂಪನಿಗೆ ಸರ್ಕಾರದಿಂದ ಈ ಹಿಂದೆ ಎಷ್ಟೆಷ್ಟು ಭೂಮಿ ನೀಡಲಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಎಂಬಿ ಪಾಟೀಲ್​​ ನೇತೃತ್ವದಲ್ಲಿ ಜಿಂದಾಲ್ ಸಂಪುಟ ಉಪಸಮಿತಿ ಮೊದಲ ಸಭೆ!

By

Published : Jul 8, 2019, 11:19 PM IST

ಬೆಂಗಳೂರು: ರಾಜ್ಯದ ಕ್ಷಿಪ್ರ ರಾಜಕೀಯ ಬೆಳವಣಿಗೆ ಮಧ್ಯೆಯೇ ಜಿಂದಾಲ್ ಕಂಪನಿಗೆ ಭೂಮಿ ಪರಾಭಾರೆ ಸಂಬಂಧ ರಾಜ್ಯ ಸರ್ಕಾರ ರಚಿಸಿರುವ ಗೃಹ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಿತು.

ಸಮಿತಿ ರಚನೆಯಾದ ಬಳಿಕ ಸೋಮವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಸಭೆ ನಡೆಯಿತು. ಸಭೆಯಲ್ಲಿ ದಾಖಲೆಗಳನ್ನು ಪರಿಶೀಲಿಸಿ, ಹಲವು ಮಾಹಿತಿಯನ್ನು ಕಲೆಹಾಕಲಾಗಿದೆ. ಸಭೆಯಲ್ಲಿ ಜಿಂದಾಲ್ ಕಂಪನಿಗೆ ಸರ್ಕಾರದಿಂದ ಈ ಹಿಂದೆ ಎಷ್ಟೆಷ್ಟು ಭೂಮಿ ನೀಡಲಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಜೊತೆಗೆ ಜಿಂದಾಲ್ ಕಂಪನಿ ವಿರುದ್ಧ ಯಾವುದಾದರೂ ದೂರುಗಳು ಬಂದಲ್ಲಿ ಅವುಗಳನ್ನು ಸ್ವೀಕರಿಸಿ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಲಾಯಿತು. ಬಳ್ಳಾರಿ ಜಿಲ್ಲೆಯಲ್ಲಿ 3667 ಎಕರೆ ಭೂಮಿಯನ್ನು ಜಿಂದಾಲ್ ಕಂಪನಿಗೆ ಲೀಸ್ ಕಮ್ ಡೀಡ್ ಮಾಡಿಕೊಡಲು ಬಿಜೆಪಿ ಹಾಗೂ ಆಡಳಿತ ಪಕ್ಷದ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿತ್ತು.

ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ಕಾಂಗ್ರೆಸ್‌ನ ಎಲ್ಲಾ ಸಚಿವರು ಸೋಮವಾರ ಬೆಳಗ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸಲ್ಲಿಸಿದ ಬಳಿಕವೂ ಮಧ್ಯಾಹ್ನ ವಿಧಾನಸೌಧಕ್ಕೆ ತೆರಳಿದ ಸಚಿವರು, ಉಪ ಸಮಿತಿ ಸಭೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ರಾಜೀನಾಮೆ ನೀಡಿದ ಬಳಿಕ ತಾಂತ್ರಿಕವಾಗಿ ಸಭೆ ನಡೆಸುವ ನೈತಿಕತೆ ಇರುತ್ತೋ ಎಂಬ ಬಗ್ಗೆ ಪ್ರಶ್ನೆಗಳು ಮೂಡಿವೆ.

ಆದರೆ, ಸಚಿವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ನಿಯಮದಂತೆ ಸಿಎಂ ಸಚಿವರ ರಾಜೀನಾಮೆಯನ್ನು ರಾಜ್ಯಪಾಲರಿಗೆ ಕಳುಹಿಸಿ ಅಂಗೀಕರಿಸುವಂತೆ ಮನವಿ ಮಾಡಬೇಕು. ರಾಜ್ಯಪಾಲರು ರಾಜೀನಾಮೆ ಅಂಗೀಕರಿಸಿದ ಬಳಿಕವಷ್ಟೇ ಸಚಿವ ಸ್ಥಾನ ಇರುವುದಿಲ್ಲ. ಹೀಗಾಗಿ ಸಚಿವ ಸಂಪುಟ ಸಮಿತಿ ಸಭೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ABOUT THE AUTHOR

...view details