ಕರ್ನಾಟಕ

karnataka

ETV Bharat / state

ಬಹುಕೋಟಿ ವಂಚನೆ ಪ್ರಕರಣ: ಕಣ್ವ ಗ್ರೂಪ್ ಆಫ್ ಕಂಪನಿ ಎಂಡಿ ಬಂಧನ

ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಕಣ್ವ ಗ್ರೂಪ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯನನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿ ಏಳು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

Kanwa group MD Nanjundayya arrested
Kanwa group MD Nanjundayya arrested

By

Published : Aug 27, 2020, 5:07 PM IST

ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಕಣ್ವ ಗ್ರೂಪ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯ ಎಂಬುವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿ ಏಳು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ನಂಜುಂಡಯ್ಯನನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು 34ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಏಳು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡರು.

ಗ್ರಾಹಕರಿಂದ ಪಡೆದಿದ್ದ ಅಸಲು ಹಾಗೂ ಬಡ್ಡಿ ಹಣವನ್ನು ಹಿಂದಿರುಗಿಸದೆ ವಂಚನೆ ಎಸಗಿದ ಆರೋಪ ಇವರ ಮೇಲಿದೆ. 80 ಕೋಟಿ ರೂಪಾಯಿ ವಂಚನೆ ಎಸಗಿರುವುದಾಗಿ ವಿಚಾರಣೆಯಲ್ಲಿ ತಿಳಿದುಬಂದಿದೆ.

ರಾಜಾಜಿನಗರದಲ್ಲಿ ಕಣ್ವ ಸಮೂಹ ಸಂಸ್ಥೆಗಳ ಕೇಂದ್ರ ಕಚೇರಿಯಿದ್ದು, ಸೌಹಾರ್ದ ಕೋ ಆಪರೇಟಿವ್ ಸೂಸೈಟಿಯನ್ನು ಕೂಡಾ ನಂಜುಂಡಯ್ಯ ಹೊಂದಿದ್ದಾರೆ. ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಶೇ.12.5 ರಷ್ಟು ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ, ಬಳಿಕ ಅಸಲು ಹಾಗೂ ಬಡ್ಡಿ ಹಣ ನೀಡದೆ ವಂಚಿಸಿದ ಆರೋಪದಡಿ ಕಳೆದ ವರ್ಷ ನವೆಂಬರ್​ನಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಳೆದ‌ 16 ವರ್ಷಗಳ ಹಿಂದೆ ಕಣ್ವ ಸಮೂಹ ಕಂಪನಿ ಹುಟ್ಟುಹಾಕಿದ್ದ ನಂಜುಂಡಯ್ಯ, ಕೋ ಆಪರೇಟಿವ್ ಸೊಸೈಟಿ, ರಿಯಲ್ ಎಸ್ಟೇಟ್, ಆಸ್ಪತ್ರೆ ಹಾಗೂ ಗಾರ್ಮೆಂಟ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳ‌ಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಮೇಲ್ನೋಟಕ್ಕೆ ವಂಚನೆ ಪ್ರಕರಣ ಸಾಬೀತು ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಕೆಲದಿನಗಳ ಹಿಂದೆಯಷ್ಟೇ ಕಣ್ವ ಗ್ರೂಪ್​ನ 5 ‌ನಿರ್ದೇಶಕರ ಮನೆಗಳ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಮಹತ್ವದ ದಾಖಲಾತಿಯನ್ನು ವಶಕ್ಕೆ ಪಡೆದುಕೊಂಡಿದ್ದರು.

ABOUT THE AUTHOR

...view details