ಕರ್ನಾಟಕ

karnataka

ETV Bharat / state

ಸೆ. 24ರಿಂದ ವೈದ್ಯಕೀಯ ಸೇವೆ ಬಹಿಷ್ಕಾರ; ಮನೆಯಲ್ಲಿದ್ದು ಆರೋಗ್ಯ ಸಿಬ್ಬಂದಿ ಮುಷ್ಕರ - ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ

ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ.‌ ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, ಹೆಚ್​ಆರ್​​ ಪಾಲಿಸಿ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.

Contract staff of health& family welfare department, to stay away from Covid duty
ಪ್ರತಿಭಟನೆ

By

Published : Sep 23, 2020, 1:06 AM IST

ಬೆಂಗಳೂರು: ಕೊರೊನಾ ಸಹಿತ ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ ವರದಿ ತಡೆಹಿಡಿದು ವೈದ್ಯಕೀಯ ಸಿಬ್ಬಂದಿ ಆರಂಭಿಸಿದ ಮೊದಲ ದಿನದ ಪ್ರತಿಭಟನೆಯೂ ನಾಳೆಗೂ ಮುಂದುವರೆಯಲಿದೆ.

ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ.‌ ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, ಹೆಚ್​ಆರ್​​ ಪಾಲಿಸಿ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದು, ಮೊದಲ ದಿನ ನೌಕರರು ಯಾವುದೇ ವರದಿಯನ್ನು ಸಲ್ಲಿಸಿಲ್ಲ, ನಾಳೆಯೂ ಸಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಸೆ.24 ರಿಂದ ಸೇವೆ ಬಹಿಷ್ಕರಿಸಿ ಮನೆಯಲ್ಲಿ ಇದ್ದು ಪ್ರತಿಭಟನೆ ಮಾಡಲು ಸಜ್ಜಾಗಿದ್ದಾರೆ. ನಾಳೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಕೇತ ಪ್ರತಿಭಟನೆ ನಡೆಸಿ 24ರಿಂದ ಸೇವ ಬಹಿಷ್ಕರಿಸಲು ಕರೆ ಕೊಟ್ಟಿದ್ದಾರೆ.

ABOUT THE AUTHOR

...view details