ಬೆಂಗಳೂರು: ಉಕ್ರೇನ್‌ನ ಖಾರ್ಕಿವ್‌ನಲ್ಲಿ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಸೋಮವಾರ ಕರ್ನಾಟಕಕ್ಕೆ ಆಗಮಿಸಲಿದೆ. ಇಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ ಈ ಮಾಹಿತಿ ಹಂಚಿಕೊಂಡಿದ್ದಾರೆ.
ರಷ್ಯಾ-ಉಕ್ರೇನ್ ಸಂಘರ್ಷದ ಮಧ್ಯೆ ಮಾರ್ಚ್ 1ರಂದು ರಷ್ಯಾ ನಡೆಸಿದ್ದ ಶೆಲ್ ದಾಳಿಯಲ್ಲಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದರು. ಹಾವೇರಿ ಜಿಲ್ಲೆಯ ಚಳಗೇರಿಯಿಂದ ವೈದ್ಯಕೀಯ ವ್ಯಾಸಂಗಕ್ಕಾಗಿ ನವೀನ್ ಉಕ್ರೇನ್‌ಗೆ ತೆರಳಿದ್ದರು. ಈ ಯುವಕ ಮೃತಪಟ್ಟು 21 ದಿನಗಳಾದ ಬಳಿಕ ಮೃತದೇಹ ತಾಯ್ನಾಡಿಗೆ ಬರುತ್ತಿದೆ. ಸೋಮವಾರ ಸಂಜೆ ಹಾವೇರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.