ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ರವಿಶಂಕರ್, ರಾಹುಲ್, ವೈಭವ್ ಜೈನ್, ಪ್ರಶಾಂತ್ ರಾಂಕಾ, ನಿಯಾಜ್ ಸೇರಿದಂತೆ ಒಟ್ಟು 7 ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಡ್ರಗ್ಸ್ ಪ್ರಕರಣ: 7 ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ - 7 ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ
ಡ್ರಗ್ಸ್ ಮಾಫಿಯಾ ಆರೋಪಿಗಳಾದ ರವಿಶಂಕರ್, ರಾಹುಲ್, ವೈಭವ್ ಜೈನ್, ಪ್ರಶಾಂತ್ ರಾಂಕಾ, ನಿಯಾಜ್ ಸೇರಿದಂತೆ ಒಟ್ಟು 7 ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
![ಡ್ರಗ್ಸ್ ಪ್ರಕರಣ: 7 ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ Medical test for 7 accused of sandalwood drug case](https://etvbharatimages.akamaized.net/etvbharat/prod-images/768-512-8773825-thumbnail-3x2-bngg.jpg)
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ ಹಿಡಿದು ಸಿಸಿಬಿ ಕಚೇರಿಗೆ ಎಂಟ್ರಿ ಕೊಟ್ಟಿರುವ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಂಗಿ ಕಳೆದ ಒಂದೂವರೆ ಗಂಟೆಯಿಂದಲೂ ಅಧಿಕಾರಿಗಳಿಗೆ ಡ್ರಗ್ಸ್ ದಂಧೆ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಈ ಮಧ್ಯೆ 7 ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಪೊಲೀಸ್ ಕಸ್ಟಡಿಯಲ್ಲಿ ಇರುವುದರಿಂದ ಬಂಧಿತ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದು ನಿಯಮ. ಮೆಡಿಕಲ್ ಟೆಸ್ಟ್ ಬಳಿಕ ಇಂದು ಮಧ್ಯಾಹ್ನ ವೈಭವ್ ಜೈನ್ಗೂ ಇನ್ನುಳಿದ ಆರೋಪಿಗಳಿಗೂ ಇರುವ ನಂಟಿನ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿಗಳು ಸಿದ್ಧತೆ ನಡೆಸಿಕೊಂಡಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ಈವರೆಗೂ 10ಕ್ಕಿಂತ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.