ಬೆಂಗಳೂರು:ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದಾರೆ. ನಗರ ಪೊಲೀಸ್ ಆಯುಕ್ತ ಸಿ.ಹೆಚ್.ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸುಬ್ರಹ್ಮಣ್ಯೇಶ್ವರ ರಾವ್, ಸಂದೀಪ್ ಪಾಟೀಲ್, ಡಿಸಿಪಿಗಳು ಭಾಗಿಯಾಗಿದ್ದಾರೆ.
ಹೊಸ ವರ್ಷಕ್ಕೆ ಬೆಂಗಳೂರು ಕೇಂದ್ರ ವಿಭಾಗದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ಗಳಲ್ಲಿ ಹೆಚ್ಚಿನ ಜನಸಮೂಹ ಸೇರಲಿದ್ದು, ಕೈಗೊಳ್ಳಬೇಕಾದ ಅಗತ್ಯ ಭದ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಬೆಂಗಳೂರು ಕೇಂದ್ರ ವಿಭಾಗವೊಂದರಲ್ಲೇ 31 ಪಬ್, 5 ಡಿಸ್ಕೋಥೆಕ್, 26 ಲೇಡಿಸ್ ಬಾರ್, 13 ಕ್ಲಬ್ ಹಾಗೂ 71 ರೆಸ್ಟೋರೆಂಟ್ಗಳಿದ್ದು, ಅವುಗಳ ಮಾಲೀಕರೊಂದಿಗೆ ನಿಯಮಾವಳಿಗಳ ಬಗ್ಗೆ ಚರ್ಚೆ ಮಾಡಲಾಗಿದೆ.