ಕರ್ನಾಟಕ

karnataka

ETV Bharat / state

ಕೆಂಪೇಗೌಡ ಪ್ರತಿಮೆ, ಏರ್‌ಪೋರ್ಟ್ ಟರ್ಮಿನಲ್ ಉದ್ಘಾಟನೆಗೆ ಮೋದಿ ಆಗಮನ: ಸಿದ್ದತೆಗೆ ಸಿಎಂ ಸೂಚನೆ - Modi arrivesinauguration of the airport terminal

ನ.11ರಂದು ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಸಂಬಂಧ ಕಾರ್ಯಕ್ರಮದ ಸಕಲ ಸಿದ್ಧತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಪೂರ್ವಭಾವಿ ಸಭೆ ನಡೆಯಿತು.

pm-modi-is-unveiling-the-statue-of-kempegowda
ಕೆಂಪೇಗೌಡ ಪ್ರತಿಮೆ, ಏರ್ ಪೋರ್ಟ್ ಟರ್ಮಿನಲ್ ಉದ್ಘಾಟನೆಗೆ ಮೋದಿ ಆಗಮನ : ಸಿದ್ದತೆಗೆ ಸಿಎಂ ಸೂಚನೆ

By

Published : Oct 20, 2022, 7:49 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಉದ್ಘಾಟನೆ ಹಾಗೂ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಈ ಸಂಬಂಧ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ಸಕಲ ಸಿದ್ದತೆಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸೂಚನೆ ನೀಡಿದರು. ಕಾರ್ಯಕ್ರಮದಿಂದ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕಾಗದಂತೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಅವರು ತಿಳಿಸಿದರು.

ಮೃತ್ತಿಕೆ ಸಂಗ್ರಹ ಅಭಿಯಾನ: ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ ಎಂಬ ಅಭಿಯಾನ ನಾಳೆಯಿಂದ ಪ್ರಾರಂಭವಾಗಲಿದೆ. ಈ ಅಭಿಯಾನ ಯಶಸ್ವಿಗೊಳಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಪಿಡಿಓಗಳ ಸಹಕಾರ ಪಡೆಯುವಂತೆ ಮುಖ್ಯಮಂತ್ರಿಗಳು ಹೇಳಿದರು.

ಮೃತ್ತಿಕೆ ಸಂಗ್ರಹಿಸಲು 20 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದ್ದು 15 ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮೃತ್ತಿಕೆ ಸಂಗ್ರಹಿಸಲಾಗುವುದು ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದರು. ಇದಕ್ಕೆ ಪ್ರತಿಯಾಗಿ ಮೃತ್ತಿಕೆ ಸಂಗ್ರಹ ಅಭಿಯಾನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ಕೊಟ್ಟರು.

ಸಭೆಯಲ್ಲಿ ಸಚಿವರಾದ ಆರ್. ಅಶೋಕ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ್, ಬಿ. ಎ. ಬಸವರಾಜ, ಕೆ. ಗೋಪಾಲಯ್ಯ, ಕೆ.ಸಿ. ನಾರಾಯಣ ಗೌಡ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ, ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ :ನ.11ರಂದು ಪ್ರಧಾನಿಯಿಂದ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ: ನಾಳೆಯಿಂದ ಮೃತ್ತಿಕಾ ಅಭಿಯಾನ

ABOUT THE AUTHOR

...view details