ಬೆಂಗಳೂರು:ಒಗ್ಗಟ್ಟಿನ ಮಂತ್ರ ಜಪಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯ ಸಮಗ್ರ ಮಾಹಿತಿಯನ್ನು ಹೈಕಮಾಂಡ್‌ಗೆ ರವಾನಿಸಲಾಗಿದೆ. ಹೈಕಮಾಂಡ್ ಸೂಚನೆಯಂತೆ ಎರಡು ದಿನಗಳ ಹಿಂದೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ನಿವಾಸದಲ್ಲಿ ಹಿರಿಯ ನಾಯಕರ ಸಭೆ ಕರೆಯಲಾಗಿತ್ತು. ಅಲ್ಲಿ ನಾಯಕರು ನಡೆಸಿದ ಚರ್ಚೆ ಹಾಗೂ ಅಭಿಪ್ರಾಯಗಳು ಸೇರಿ ಸಂಪೂರ್ಣ ಮಾಹಿತಿಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಪರಮೇಶ್ವರ್ ಕಳಹಿಸಿದ್ದಾರೆ. ಹಾಗೂ ಅವರು ನೇರ ಭೇಟಿಗೆ ಸಮಯ ಕೇಳಿದ್ದಾರೆ ಎನ್ನಲಾಗಿದೆ.
ಮಾಜಿ ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ನಡೆದ ಸಭೆಯ ಮಾಹಿತಿ ಹೈಕಮಾಂಡ್‌ಗೆ ರವಾನೆ.. - ಡಾ.ಜಿ. ಪರಮೇಶ್ವರ್ ನಿವಾಸದಲ್ಲಿ ಸಭೆ
ಒಗ್ಗಟ್ಟಿನ ಮಂತ್ರ ಜಪಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯ ಸಮಗ್ರ ಮಾಹಿತಿಯನ್ನು ಹೈಕಮಾಂಡ್‌ಗೆ ರವಾನಿಸಲಾಗಿದೆ.
![ಮಾಜಿ ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ನಡೆದ ಸಭೆಯ ಮಾಹಿತಿ ಹೈಕಮಾಂಡ್‌ಗೆ ರವಾನೆ.. G Parameshwar](https://etvbharatimages.akamaized.net/etvbharat/prod-images/768-512-5617261-thumbnail-3x2-smk.jpg)
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕನ ಸ್ಥಾನದ ಕುರಿತು ಚರ್ಚಿಸಿರುವ ನಾಯಕರು, ಎಲ್ಲಾ ನಾಯಕರು ಒಗ್ಗಟ್ಟಿನಿಂದ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕೆಂಬ ಅಂಶಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ನೇಮಕ ಮಾಡುವ ಬಗ್ಗೆ ಯಾರಿಗೆಲ್ಲಾ ಒಲವು ಇದೆ. ಇದರ ಜೊತೆಗೆ ಸಿಎಲ್ಪಿ ನಾಯಕನ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬುದರ ಬಗೆಗಿನ ಮಾಹಿತಿಯನ್ನೂ ಇ-ಮೇಲ್ ಮೂಲಕ ಪರಮೇಶ್ವರ್ ರವಾನಿಸಿದ್ದಾರೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ಜವಾಬ್ದಾರಿ ಹೈಕಮಾಂಡ್‌ಗೆ ಬಿಡಿ. ನೀವು ಮೊದಲು ಒಟ್ಟಾಗಿ ಸಭೆ ಸೇರಿ ಒಮ್ಮತ ಹಾಗೂ ಒಗ್ಗಟ್ಟು ಪ್ರದರ್ಶಿಸಿ. ಇದೇ ಕಾರಣಕ್ಕೆ ಗುಂಪು ಗುಂಪಾಗಿ ದಿಲ್ಲಿಯತ್ತಬರಬೇಡಿ ಎಂದು ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನಡೆಸಿದ್ದ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ನಿರ್ಧಾರಕ್ಕೆ ಸಹಮತ ವ್ಯಕ್ತಪಡಿಸೋದಾಗಿ ಹೇಳಿದ್ದಾರೆ.