ಬೆಂಗಳೂರು: ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ ನಡೆಯಿತು.
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಡಿಸಿಎಂ ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಮಾಜಿ ಸಚಿವ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ತುಕಾರಾಂ ಭಾಗಿಯಾಗಿದ್ದರು. ಮಾಜಿ ಸ್ಪೀಕರ್ ಹಾಗೂ ಶಾಸಕ ರಮೇಶ್ ಕುಮಾರ್ ವಿರುದ್ಧ ಸಚಿವ ಡಾ. ಕೆ.ಸುಧಾಕರ್ ಮಾಡಿರುವ ಆರೋಪದ ಹಕ್ಕುಚ್ಯುತಿ ಮಂಡನೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.