ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವುದು ಸೇರುದಂತೆ ಹಲವು ಮಹತ್ವದ ನಿರ್ಣಯಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಕೈಗೊಳ್ಳಲಾಯಿತು.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಕುರಿತು ಮಹತ್ವದ ಸಭೆ ನಡೆಯಿತು. ಸಿಎಂ ಬಿಎಸ್ವೈ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆ ಡಿಜಿ-ಐಜಿಪಿ ಪ್ರವೀಣ್ ಸೂದ್, ಗುಪ್ತ ವಾರ್ತೆ ಅಪರ ಮುಖ್ಯ ಕಾರ್ಯದರ್ಶಿ ಬಿ.ದಯಾನಂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಕಾನೂನು ಸುವ್ಯವಸ್ಥೆ ಅಪರ ಮಹಾನಿರ್ದೇಶಕ ಅಮರ್ ಕುಮಾರ್ ಪಾಂಡೆ ಭಾಗಿಯಾಗಿದ್ದರು.
ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಎಲ್ಲಾ ಆಯಾಮದಲ್ಲಿಯೂ ಚರ್ಚೆ ನಡೆಸಲಾಯಿತು. ತನಿಖಾ ಹಂತದಲ್ಲಿ ಯಾವ ಲೋಪವೂ ಆಗಬಾರದು. ಆರೋಪಿಗಳು ತಪ್ಪಿಸಿಕೊಳ್ಳಬಾರದು ಎನ್ನುವುದು ಸೇರಿದಂತೆ ಹಲವು ಆಯಾಮಗಳಲ್ಲಿ ಚರ್ಚೆ ನಡೆಸಲಾಯಿತು.
ಸಭೆಯ ಪ್ರಮುಖ ಅಂಶಗಳು: