ಕರ್ನಾಟಕ

karnataka

ETV Bharat / state

ಬಜೆಟ್​ ಘೋಷಣೆಗಳ ಅನುಷ್ಠಾನ... ಅಧಿಕಾರಿಗಳೊಂದಿಗೆ ಈಶ್ವರಪ್ಪ ಸಭೆ - 2019-20 ನೇ ಸಾಲಿನ ಪಂಚಾಯತ್ ರಾಜ್ ಇಲಾಖೆಯ ಬಜೆಟ್ ಅನುಷ್ಠಾನ

2020-21 ನೇ ಸಾಲಿನ ಬಜೆಟ್​ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.

Meeting with Minister Eshwarappa officials on the implementation of programs announced in the budget
ಸಚಿವ ಈಶ್ವರಪ್ಪ ಅಧಿಕಾರಿಗಳೊಂದಿಗೆ ಸಭೆ

By

Published : May 13, 2020, 7:47 PM IST

ಬೆಂಗಳೂರು:2019-20 ನೇ ಸಾಲಿನ ಪಂಚಾಯತ್ ರಾಜ್ ಇಲಾಖೆಯ ಬಜೆಟ್ ಅನುಷ್ಠಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಭೆ ನಡೆಸಿದರು.

ಸಚಿವ ಈಶ್ವರಪ್ಪ ಅಧಿಕಾರಿಗಳೊಂದಿಗೆ ಸಭೆ

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಸಭೆ ನಡೆಸಿದ ಸಚಿವರು, 2019-20ನೇ ಸಾಲಿನ ಬಜೆಟ್​​​ನಲ್ಲಿ ಇಲಾಖೆಗೆ ಘೋಷಣೆಯಾದ ಹಾಗೂ ಚಾಲ್ತಿಯಲ್ಲಿದ್ದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಹಾಗೂ 2020-21 ನೇ ಸಾಲಿನ ಬಜೆಟ್​ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ನರೇಗಾ ಆಯುಕ್ತ ಅನಿರುದ್ಧ ಶ್ರವಣ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಆಯುಕ್ತ ವಿಶಾಲ್, ಸಚಿವರ ವಿಶೇಷ ಅಧಿಕಾರಿ ಶ್ರೀ ಜಿ.ಜಯರಾಮ್ ಮತ್ತಿತರರು ಉಪಸ್ಥಿತರಿದ್ದರು.

For All Latest Updates

TAGGED:

ABOUT THE AUTHOR

...view details