ಬೆಂಗಳೂರು :ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ಸಿಎಂ ಸ್ಟಾಲಿನ್ಗೆ ಸಿಎಂ ಬಿಎಸ್ವೈ ಪತ್ರ ಬರೆದಿದ್ದಾರೆ. ಮೇಕೆದಾಟು ಯೋಜನೆಯಿಂದ ಎರಡು ರಾಜ್ಯಗಳಿಗೆ ಅನುಕೂಲವಾಗಲಿದೆ. ತಮಿಳುನಾಡಿನ ರೈತರಿಗೆ ಇದರಿಂದ ಯಾವುದೇ ಸಮಸ್ಯೆ ಇಲ್ಲ.
ಆದರೂ ನೀವು ಈ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಹಲವು ಅರ್ಜಿ ಸಲ್ಲಿಸಿದ್ದೀರಾ.. ಕರ್ನಾಟಕ ಸರ್ಕಾರವೂ ಯೋಜನೆಗೆ ಅನುಮೋದನೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ತಮಿಳುನಾಡು ಸಿಎಂ ಸ್ಟಾಲಿನ್ ಗೆ ಸಿಎಂ ಬಿಎಸ್ ವೈ ಪತ್ರ ಇದರ ಜೊತೆಗೆ ಕಾವೇರಿ ಕಣಿವೆಯಲ್ಲಿ ತಮಿಳುನಾಡು ಎರಡು ಜಲವಿದ್ಯುತ್ ಘಟಗಳ ಸ್ಥಾಪನೆಗೆ ಯೋಜಿಸಿದೆ. ಈ ಸಂಬಂಧ ತಮಿಳುನಾಡು ಕರ್ನಾಟಕ ಸರ್ಕಾರದ ಜೊತೆ ಯಾವುದೇ ಸಮಾಲೋಚನೆ ನಡೆಸಿಲ್ಲ. ಕರ್ನಾಟಕ ಸರ್ಕಾರದ ಸಮ್ಮತಿ ಸಹ ಪಡೆದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎರಡೂ ರಾಜ್ಯಗಳ ಮಧ್ಯೆ ಸೌಹಾರ್ದ ಸಂಬಂಧ ಬೆಳೆಯಬೇಕು. ಹೀಗಾಗಿ, ಮೇಕೆದಾಟು ಯೋಜನೆಗೆ ಯಾವುದೇ ವಿರೋಧ ವ್ಯಕ್ತಪಡಿಸಬಾರದು. ಎರಡು ರಾಜ್ಯಗಳ ಅಧಿಕಾರಿಗಳು ಜತೆಗೂಡಿ ದ್ವಿಪಕ್ಷೀಯ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ಎರಡು ರಾಜ್ಯಗಳ ನಡುವೆ ಉತ್ತಮ ಸಂಬಂಧ ವೃದ್ಧಿಗಾಗಿ ನಾನು ಎದುರು ನೋಡುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.