ಕರ್ನಾಟಕ

karnataka

ETV Bharat / state

ಮುಂದಿನ 3 ದಿನ ರಾಜ್ಯಾದ್ಯಂತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - etv bharat karnataka

Rain in Karnataka: ರಾಜ್ಯ ಪ್ರಾಕೃತಿಕ ವಿಕೋಪ ನಿಗಾ ಕೇಂದ್ರ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

meteorological-department-forecast-rain-in-state-for-the-next-three-days
ಮುಂದಿನ 3 ದಿನ ರಾಜ್ಯಾದ್ಯಂತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

By ETV Bharat Karnataka Team

Published : Nov 7, 2023, 5:33 PM IST

ಬೆಂಗಳೂರು: ರಾಜ್ಯದ ಹಲವು ಕಡೆ ಇಂದೂ ಮಳೆಯ ಸಿಂಚನ ಮುಂದುವರದಿದೆ. ಮತ್ತೊಂದೆಡೆ, ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ರಾಜ್ಯ ಪ್ರಾಕೃತಿಕ ವಿಕೋಪ ನಿಗಾ ಕೇಂದ್ರ ಮಳೆಯ ಮುನ್ಸೂಚನೆ ನೀಡಿದೆ. ನವೆಂಬರ್ 8 ಮತ್ತು 9 ರಂದು ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, 10 ರಂದು ಮಳೆಯ ಪ್ರಮಾಣ ಇಳಿಕೆಯಾಗಲಿದೆ. 11 ರಂದು ಮಳೆ ಅಷ್ಟಾಗಿ ಇರುವುದಿಲ್ಲ. ನಂತರ ಮುಂದಿನ ಮೂರು ದಿನ ಒಣ ಹವೆ ಇರಲಿದೆ ಎಂದು ಒಂದು ವಾರದ ಹವಾಮಾನ ವರದಿಯನ್ನು ರಾಜ್ಯ ಪ್ರಾಕೃತಿಕ ವಿಕೋಪ ನಿಗಾ ಕೇಂದ್ರ ಬಿಡುಗಡೆ ಮಾಡಿದೆ.

ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ನಿಗಾ ಕೇಂದ್ರ ಇಂದು ಉಪಗ್ರಹಾಧಾರಿತ ಮಳೆ ನಕ್ಷೆಯನ್ನು ಬಿಡುಗಡೆ ಮಾಡಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ನೀಡಿದೆ. ಅದರಂತೆ ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಾಮರಾಜನಗರ, ಮಂಗಳೂರು, ಉಡುಪಿ, ಕೊಡಗು, ಚಿಕ್ಕಬಳ್ಳಾಪುರ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇನ್ನುಳಿದಂತೆ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಗರಿಷ್ಠ 10 ಮಿ.ಮೀ ವರೆಗೆ ಸಾಧಾರಣವಾಗಿ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಮಳೆಯ ಮುನ್ಸೂಚನೆ ನೀಡಿದೆ.

ಮಳೆ ಮುನ್ಸೂಚನೆಯ ಪ್ರಕಾರ ಎರಡನೇ ದಿನವಾದ ನವೆಂಬರ್ 9 ರಂದು ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು, ಉಡುಪಿ, ಉತ್ತರ ಕನ್ನಡ , ವಿಜಯನಗರ, ರಾಯಚೂರು, ಚಿತ್ರದುರ್ಗ, ತುಮಕೂರು ಬೀದರ್, ಕಲಬುರಗಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಕಡೆಗಳಲ್ಲಿ ಉತ್ತಮ ಮಳೆಯಾಗಲಿದೆ. ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿಯ ದಕ್ಷಿಣ, ಉತ್ತರ ಕನ್ನಡ ಜಿಲ್ಲೆಯ ಉತ್ತರ, ಹಾಸನ, ಕೊಡಗು, ಮೈಸೂರು, ತುಮಕೂರು, ಕಲಬುರಗಿಯ ಉತ್ತರ ಭಾಗ, ಬೀದರ್ ಉತ್ತರ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಉಪಗ್ರಹಾಧಾರಿತ ಮಳೆ ನಕ್ಷೆಗಳನ್ನು ಬಿಡುಗಡೆ ಮಾಡಿ ರಾಜ್ಯ ಪ್ರಾಕೃತಿಕ ವಿಕೋಪ ನಿಗಾ ಕೇಂದ್ರ ಮಳೆ ಕುರಿತ ಮಾಹಿತಿ ನೀಡಿದೆ.

ಇದನ್ನೂ ಓದಿ:ರಾಜ್ಯದ ಹಲವೆಡೆ ಹಿಂಗಾರು ಮಳೆ ಮಜ್ಜನ; ಯಲಹಂಕದ ಕೋಗಿಲು ಕ್ರಾಸ್ ಜಲಾವೃತ

ABOUT THE AUTHOR

...view details