ಕರ್ನಾಟಕ

karnataka

ETV Bharat / state

ಮರಳು, ಕಲ್ಲು ಕ್ವಾರಿ ಉದ್ಯಮಿಗಳ ಸಮಸ್ಯೆ ಪರಿಹಾರಕ್ಕೆ ಬದ್ಧ; ಸಚಿವ ನಿರಾಣಿ - Mines and Geology Minister Murugesh R. Nirani

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಸೂಕ್ತ ಅವಕಾಶಗಳನ್ನು ಕಲ್ಪಿಸಿ ಕೊಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಹೇಳಿದ್ದಾರೆ.

Mines and Geology Minister Murugesh R. Nirani
ಬಂಡವಾಳ ಹೂಡಿಕೆಗೆ ಸೌಕರ್ಯ ನೀಡಲಿದ್ದೇವೆ ಎಂದ ನಿರಾಣಿ

By

Published : Feb 18, 2021, 10:46 PM IST

ಬೆಂಗಳೂರು : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ' ಮನೆಬಾಗಿಲಿಗೆ' ರಾಜ್ಯ ಸರ್ಕಾರ ಹೋಗುವ ವಿನೂತನ ಯೋಜನೆಯನ್ನು ರೂಪಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಪ್ರಕಟಿಸಿದ್ದಾರೆ.

ವಿಕಾಸಸೌಧದಲ್ಲಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ಸ್ ನಿಯೋಗವು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಅವರನ್ನು ಭೇಟಿ ಆಗಿ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ನಿರಾಣಿ, ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯ ನೆರವು ನೀಡಲಿದ್ದೇವೆ. 'ಉದ್ಯಮಸ್ನೇಹಿ' ಮಾಡುವುದು ತಮ್ಮ ಮುಂದಿರುವ‌ ಮೊದಲ ಸವಾಲು. ಮರಳು, ಕಲ್ಲು ಕ್ವಾರಿ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

2021- 2026ನೇ ಸಾಲಿನ ಹೊಸ ಮರಳು ನೀತಿ ಜಾರಿಗೆ ಬರಲಿದೆ. ಇದರಲ್ಲಿ ಅನೇಕ ಹೊಸ ಸುಧಾರಣೆಗಳನ್ನು ಜಾರಿಗೆ ಮಾಡುತ್ತಿದ್ದೇವೆ. ಕಟ್ಟಕಡೆಯ ಮನುಷ್ಯನಿಗೂ ಸುಲಭವಾಗಿ ಮರಳು ಸಿಗಬೇಕು ಎಂಬುವುದೇ ನಮ್ಮ ಮುಖ್ಯ ಉದ್ದೇಶ. ಬಜೆಟ್‍ನಲ್ಲಿ ಕ್ವಾರಿ ಮತ್ತು ಸ್ಟೋರ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ ಮುಂದಿಟ್ಟಿರುವ ಬೇಡಿಕೆಗಳನ್ನು ಸೇರ್ಪಡೆ ಮಾಡಲಾಗುವುದು. ನೀವು ಯಾವುದೇ ಆತಂಕಪಡಬೇಕಾಗಿಲ್ಲ ಎಂದು ಅಭಯ ನೀಡಿದರು.

ABOUT THE AUTHOR

...view details