ಬೆಂಗಳೂರು: ಖಾಸಗಿ ಹೋಟೆಲ್ನಲ್ಲಿ ಇಂದು ನಡೆದ ದಕ್ಷಿಣ ಭಾರತದ ಪ್ರವಾಸೋದ್ಯಮ ಸಚಿವರ ಸಮ್ಮೇಳನ ಕಾರ್ಯಕ್ರಮದ ಬ್ಯಾನರ್ಗಳಲ್ಲಿ ಕನ್ನಡ ಬಳಸದಿರುವುದಕ್ಕೆ ಸಚಿವ ಆನಂದ್ ಸಿಂಗ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾರ್ಯಕ್ರಮ ನಡೆಯುತ್ತಿದ್ದಂತೆ ಹೊರನಡೆದ ಆನಂದ್ ಸಿಂಗ್ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿದರು. ಈ ವೇಳೆ, ಆಡಳಿತ ಭಾಷೆಯಲ್ಲಿಯೇ ವೇದಿಕೆ ಕಾರ್ಯಕ್ರಮ ನಡೆಯಬೇಕು ಎಂಬ ನಿಯಮವೇ ಇದೆ ಎಂದು ನೆನಪಿಸಿದರು.