ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ ಕೇಂದ್ರ ಪರಿಸರ, ಅರಣ್ಯ ಸಚಿವ ಭೂಪೇಂದ್ರ ಯಾದವ್ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನ ಮಾಡದಂತೆ ಮನವಿ ಮಾಡಿದರು.
ಪಶ್ಚಿಮ ಘಟ್ಟ ಕುರಿತಾಗಿನ ಕಸ್ತೂರಿ ರಂಗನ್ ವರದಿ ಜಾರಿಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಆರಗ ಜ್ಞಾನೇಂದ್ರ, ಇದರಿಂದ ಸಾವಿರಾರು ಕುಟುಂಬಗಳ ಜನರು ನೆಲೆ ಕಳೆದುಕೊಳ್ಳಲಿದ್ದಾರೆ. ಹೀಗಾಗಿ ಡಾ.ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯದ ವಿರೋಧವಿದೆ ಎಂದು ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ರಾಜ್ಯ ಸಂಪುಟ ಸಭೆಯಲ್ಲೂ ವರದಿ ಜಾರಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.