ಯಲಹಂಕ:ಬೆಂಗಳೂರು ಮೆಟ್ರೊ ರೈಲು ನಿಗಮದಿಂದ ಭೂಪರಿಹಾರ ಪಡೆಯಲು ಯಲಹಂಕ ತಹಶೀಲ್ದಾರ್ ರಘುಮೂರ್ತಿ ನಕಲಿ ದಾಖಲೆ ಸೃಷ್ಟಿಸಿ 100 ಕೋಟಿ ಹಣವನ್ನು ಹೊಡೆಯಲು ಯತ್ನಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ರಘುಮೂರ್ತಿಯವರ ವರ್ಗಾವಣೆ ಮಾಡಲಾಗಿದ್ದು, ಅವರನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ಬಿಎಸ್‌ಪಿ ಮುಖಂಡ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮ್ಮ ಮೆಟ್ರೊ ಸಂಪರ್ಕ ಕಲ್ಪಿಸಲು ಭೂಸ್ವಾಧೀನ ಪ್ರಕ್ರಿಯೆಗಳು ಆರಂಭವಾಗಿದ್ದು. ಯಲಹಂಕ ತಾಲ್ಲೂಕಿನ ಜಾಲ ಹೋಬಳಿಯ ಶೆಟ್ಟಿಗೆರೆ ಗ್ರಾಮದ ಮೂಲಕ ಮೆಟ್ರೊ ಮಾರ್ಗ ಹೋಗುತ್ತದೆ. ಮೆಟ್ರೋ ಯೋಜನೆಯ ಪರಿಹಾರಕ್ಕೆ ಹಿಂದಿನ ತಹಶೀಲ್ದಾರ್ ರಘುಮೂರ್ತಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.
ಯಲಹಂಕ ತಾಲೂಕು ಜಾಲ ಹೋಬಳಿಯ ಶೆಟ್ಟಿಗೆರೆ ಗ್ರಾಮದ ಸರ್ವೆ ನಂಬರ್ 79ರ 17 ಎಕರೆ 35 ಸರ್ಕಾರಿ ಜಾಗವನ್ನು ಕೆಂಚಣ್ಣ , ಸುಬ್ರಮಣಿ, ಬಸಮ್ಮ, ಶಾಂತಮ್ಮ, ಭಾಗಮ್ಮ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ, ಈ ದಾಖಲೆಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಕೊಟ್ಟು ಪರಿಹಾರ ಪಡೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಇದರ ವಿರುದ್ಧ ಬಿಎಸ್‌ಪಿ ಪಕ್ಷ ಹೋರಾಟ ನಡೆಸಿದ್ದು, ಈ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರು ಉತ್ತರ ವಿಶೇಷ ಜಿಲ್ಲಾಧಿಕಾರಿ ಎಂ.ಕೆ.ಜಗದೀಶ್ ಅವರು ಈ ದಾಖಲೆಗಳು ಬೋಗಸ್ ಎಂದು ಸೆಪ್ಟೆಂಬರ್ 24 ಆದೇಶ ಹೊರಡಿಸಿದ್ದರು.