ಕರ್ನಾಟಕ

karnataka

ETV Bharat / state

ಹರ್ಷನ ಕುಟುಂಬಕ್ಕೆ ₹10 ಲಕ್ಷ ನೆರವು ಘೋಷಿಸಿದ​ ಸಚಿವ ಅಶ್ವತ್ಥ​ನಾರಾಯಣ್

ಮೂಲಭೂತವಾದಿಗಳು ಹರ್ಷನಂತಹ ಒಬ್ಬ ಸೇವಾ ಮನೋಭಾವದ ವ್ಯಕ್ತಿಯನ್ನು ಬಲಿ ತೆಗೆದುಕೊಂಡಿದ್ದಾರೆ. ದುಷ್ಕರ್ಮಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹೇಯ ಕೃತ್ಯವನ್ನು ಸಂವೇದನಾಶೀಲರೆಲ್ಲರೂ ಖಂಡಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ​ನಾರಾಯಣ್ ಮನವಿ ಮಾಡಿದ್ದಾರೆ.

ಅಶ್ವತ್ಥ​ನಾರಾಯಣ್
ಅಶ್ವತ್ಥ​ನಾರಾಯಣ್

By

Published : Feb 24, 2022, 6:40 AM IST

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಸಚಿವ ಡಾ.ಸಿ.ಎನ್.ಅಶ್ವತ್ಥ​ನಾರಾಯಣ್ ಅವರು 10 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.

ಹರ್ಷ ಅವರ ತಾಯಿ ಜತೆ ಬುಧವಾರ ದೂರವಾಣಿಯಲ್ಲಿ ಮಾತನಾಡಿದ ಸಚಿವರು ಸಾಂತ್ವನ ಹೇಳಿದ್ದು, ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಆಸರೆಯಾಗಿ ಆರ್ಥಿಕ ನೆರವನ್ನು ಡಾ.ಸಿ.ಎನ್.ಅಶ್ವತ್ಥನಾರಾಯಣ್​ ಫೌಂಡೇಶನ್ ವತಿಯಿಂದ ನೀಡಲಾಗುವುದು ಎಂದು ತಿಳಿಸಿದರು.

'ಭಜರಂಗದಳದ ಕಾರ್ಯಕರ್ತನಾಗಿದ್ದ ಹರ್ಷ, ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ್ದಾನೆ. ಇಂತಹ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಘೋಷಿಸಿರುವ ಹಣವನ್ನು ತಾಯಿಯ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು' ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಚಿವರು ತಿಳಿಸಿದ್ದಾರೆ.

'ಮೂಲಭೂತವಾದಿಗಳು ಹರ್ಷನಂತಹ ಒಬ್ಬ ಸೇವಾ ಮನೋಭಾವದ ವ್ಯಕ್ತಿಯನ್ನು ಬಲಿ ತೆಗೆದುಕೊಂಡಿದ್ದಾರೆ. ದುಷ್ಕರ್ಮಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹೇಯ ಕೃತ್ಯವನ್ನು ಸಂವೇದನಾಶೀಲರೆಲ್ಲರೂ ಖಂಡಿಸಬೇಕು' ಎಂದು ಅವರು ಮನವಿ ಮಾಡಿದ್ದಾರೆ.

ABOUT THE AUTHOR

...view details