ಕರ್ನಾಟಕ

karnataka

ETV Bharat / state

ವೈದ್ಯರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ: ಸಚಿವ ಶ್ರೀರಾಮುಲು - Davangere Doctor

ಕೊಪ್ಪಳ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಯಾಗಿ ನೇಮಕವಾಗಿರುವ ರವೀಂದ್ರನಾಥ್ ಅವರ ಕುರಿತಂತೆ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, ವೈದ್ಯರ ಹಿತ ಕಾಪಾಡಲು ಸರ್ಕಾರ ಸದಾ ಸಿದ್ಧ ಎಂದಿದ್ದಾರೆ.

minister-b-sriramulu-tweets-on-doctor-posting-in-koppal
ವೈದ್ಯರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ: ಸಚಿವ ಶ್ರೀರಾಮುಲು

By

Published : Sep 10, 2020, 5:49 PM IST

ಬೆಂಗಳೂರು: ಜಿಲ್ಲಾ ಆರ್​​​ಸಿಹೆಚ್ ಅಧಿಕಾರಿ ಡಾ. ಎಂ ಹೆಚ್ ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದ ಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಅಂತೆಯೇ ವರದಿ ಪರಿಶೀಲನೆ ಬಳಿಕ ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಆಟೋ ಚಾಲನೆಗಿಳಿದಿದ್ದ ದಾವಣಗೆರೆಯ ವೈದ್ಯನೀಗ ಕೊಪ್ಪಳ ಜಿಲ್ಲೆಗೆ ಆರೋಗ್ಯಾಧಿಕಾರಿ!

ABOUT THE AUTHOR

...view details