ಬೆಂಗಳೂರು:ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದು, ತಮ್ಮ ಗಾಯನದಿಂದಲ್ಲೇ ಭಾರತದ ಸಂಗೀತ ರಸಿಕರನ್ನು ಮುಗ್ದಗೊಳಿಸಿದ್ದ ಎಸ್.ಪಿ ಬಾಲಸುಬ್ರಹ್ಮಣ್ಯಂ ಇಂದು ಮಧ್ಯಾಹ್ನ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿರುವುದು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.