ಕರ್ನಾಟಕ

karnataka

ಬೆಳಗಾವಿಯಲ್ಲಿ ಬಿಜೆಪಿ ಅಧಿಕಾರಕ್ಕೆ, ಇದೊಂದು ಐತಿಹಾಸಿಕ ಗೆಲುವು : ಸಚಿವ ಬೈರತಿ ಬಸವರಾಜ್

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಭಾರತೀಯ ಜನತಾ ಪಕ್ಷ ಪ್ರಪ್ರಥಮ ಬಾರಿಗೆ ಅಭೂತಪೂರ್ವ ಗೆಲುವನ್ನು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಐತಿಹಾಸಿಕ ಗೆಲುವಿಗೆ ಕಾರಣಕರ್ತರಾದ ಹಾಗೂ ಶ್ರಮಿಸಿದ ಭಾರತೀಯ ಜನತಾ ಪಕ್ಷದ ಎಲ್ಲಾ ಎಲ್ಲಾ ಕಾರ್ಯಕರ್ತರಿಗೂ, ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ..

By

Published : Sep 6, 2021, 7:21 PM IST

Published : Sep 6, 2021, 7:21 PM IST

ಸಚಿವ ಬೈರತಿ ಬಸವರಾಜ್
ಸಚಿವ ಬೈರತಿ ಬಸವರಾಜ್

ಬೆಂಗಳೂರು : ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶವು ತೃಪ್ತಿದಾಯಕವಾಗಿದೆ. ಮೊದಲ ಬಾರಿಗೆ ಬೆಳಗಾವಿಯಲ್ಲಿ ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದೊಂದು ಐತಿಹಾಸಿಕ ಗೆಲುವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಹಾನಗರ ಪಾಲಿಕೆಗಳಲ್ಲಿ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಪುನಃ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಜನಪರ ಯೋಜನೆಗಳು, ಸಾಧನೆಗಳು ಚುನಾವಣೆ ಮೇಲೆ ಪ್ರಭಾವ ಬೀರಿವೆ ಎನ್ನುವುದಕ್ಕೆ ಈ ಫಲಿತಾಂಶ ನಿದರ್ಶನವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನೂತನವಾಗಿ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ನಂತರ ನಡೆದ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಇದು ಅವರ ನಾಯಕತ್ವಕ್ಕೆ ಸಿಕ್ಕ ಯಶಸ್ಸು ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂರು ಮಹಾನಗರ ಪಾಲಿಕೆಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಅಭಿವೃದ್ಧಿ ಪರವಾಗಿ ಮಹಾನಗರ ಪಾಲಿಕೆ ಮತದಾರರು ಮತ ನೀಡಿದ್ದಾರೆ. ಇದು ಉತ್ತಮ ಆಡಳಿತ ನೀಡಲು ಸಹಕಾರಿಯಾಗಲಿದೆ. ಈ ಐತಿಹಾಸಿಕ ಗೆಲುವಿಗೆ ಕಾರಣಕರ್ತರಾದ ಹಾಗೂ ಶ್ರಮಿಸಿದ ಭಾರತೀಯ ಜನತಾ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ, ಮುಖಂಡರಿಗೆ ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಸಚಿವ ಬೈರತಿ ಬಸವರಾಜ್ ಅವರು.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಭಾರತೀಯ ಜನತಾ ಪಕ್ಷ ಪ್ರಪ್ರಥಮ ಬಾರಿಗೆ ಅಭೂತಪೂರ್ವ ಗೆಲುವನ್ನು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಐತಿಹಾಸಿಕ ಗೆಲುವಿಗೆ ಕಾರಣಕರ್ತರಾದ ಹಾಗೂ ಶ್ರಮಿಸಿದ ಭಾರತೀಯ ಜನತಾ ಪಕ್ಷದ ಎಲ್ಲಾ ಎಲ್ಲಾ ಕಾರ್ಯಕರ್ತರಿಗೂ, ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಸಿಎಂ ಬಸವರಾಜ ಬೊಮ್ಮಾಯಿ ನಾಯಕತ್ವಕ್ಕೆ ಜೈ ಎಂದ ಸಚಿವ ವಿ ಸೋಮಣ್ಣ

ABOUT THE AUTHOR

...view details