ಕರ್ನಾಟಕ

karnataka

By

Published : Oct 4, 2020, 1:50 PM IST

ETV Bharat / state

ಋಷಿ ಮೂಲ, ನದಿ ಮೂಲ, ಹೆಣ್ಣಿನ ಮೂಲ ಹುಡುಕಬಾರದು: ಹೆಚ್​ಡಿಕೆ ಹೇಳಿಕೆಗೆ ಸಿ.ಟಿ. ರವಿ ಪ್ರತಿಕ್ರಿಯೆ

ಸಾಮಾಜಿಕ ಜಾಲತಾಣದಲ್ಲಿ ನಮ್ಮ ಪೋಸ್ಟ್​ಗಳಿಗೆ ಸಕಾರಾತ್ಮಕ ಹಾಗೂ ನಕಾರಾತ್ಮಕ ಎರಡೂ ರೀತಿಯ ಕಮೆಂಟ್ ಬರುತ್ತವೆ. ಹಾಗಂತ‌ ನಾವು ತಲೆಕೆಡಿಸಿಕೊಂಡು ಪ್ರತಿಕ್ರಿಯೆ ಕೊಡಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

dsd
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿ.ಟಿ ರವಿ ವ್ಯಂಗ್ಯ

ಬೆಂಗಳೂರು: ನಿರೂಪಕಿ ಅನುಶ್ರೀ ಅವರು ಮಾಜಿ ಮುಖ್ಯಮಂತ್ರಿವೊಬ್ಬರಿಗೆ ಕರೆ ಮಾಡಿ ರಕ್ಷಣೆಗೆ ನೆರವು ಕೋರಿದ್ದರು ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನದಿ ಮೂಲ, ಋಷಿ ಮೂಲ, ಹೆಣ್ಣಿನ ಮೂಲ ಹುಡುಕಬಾರದು. ಅನಧಿಕೃತ ಸುದ್ದಿಗಳಿಗೆ ಪ್ರಕ್ರಿಯೆ ನೀಡಬೇಕು ಎನ್ನುವ ನಿಯಮವೇನಿಲ್ಲ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡದೇ ಇದ್ದಿದ್ದರೆ ಈ ಸುದ್ದಿಗೆ ವ್ಯಾಪಕತೆಯೇ ಸಿಗುತ್ತಿರಲಿಲ್ಲ. ರಾಜಕೀಯ ಹಿನ್ನೆಲೆ ಇರುವವರು ಇಂತಹ ಅನಧಿಕೃತ ಸುದ್ದಿಗಳಿಗೆ ತಲೆಕೆಡಿಸಿಕೊಳ್ಳಬೇಕಿರಲಿಲ್ಲ ಎಂದರು.

ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಮಗೆ ತಾತ್ವಿಕವಾಗಿ ವಿರೋಧವಾಗಿದೆ. ಅವರು ಏನೇ ಮಾಡಿದರೂ ಇಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ಸಿ ಟಿ ರವಿ ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details