ಬೆಂಗಳೂರು: ಮಧ್ಯಂತರ ಚುನಾವಣೆ ಬರುತ್ತದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಮೂಢನಂಬಿಕೆ ನಿಷೇಧ ಮಸೂದೆ ತರೋದಕ್ಕೆ ಹೊರಟಿದ್ದ ಸಿದ್ದರಾಮಯ್ಯನವರು ಭವಿಷ್ಯ ಹೇಳೋದನ್ನ ಯಾವಾಗಿನಿಂದ ಶುರುಮಾಡಿದ್ದಾರೋ ಗೊತ್ತಿಲ್ಲವೆಂದು ಸಚಿವ ಸಿ. ಟಿ. ರವಿ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಇನ್ನೂ 3 ವರ್ಷ 9 ತಿಂಗಳು ಇರುತ್ತದೆ. ಜೊತೆಗೆ, ದೀರ್ಘಾವಧಿಯ ಯೋಜನೆಗಳನ್ನ ಜಾರಿಗೆ ತರುತ್ತೇವೆ, ಆ ಬಗ್ಗೆ ಯಾವುದೇ ಅನುಮಾನ ಬೇಡ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಪ್ರಶ್ನಾತೀತ ನಾಯಕರು ಎಂದುಕೊಂಡಿದ್ದೆ. ಆದರೆ, ಅವರ ಕಾಲು ಎಳೆಯೋ ಕೆಲಸ ಅವರ ಪಕ್ಷದಲ್ಲೇ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಕಾಲು ಜಾರದೆ ಎಚ್ಚರದಿಂದಿರಿ ಅಂತ ಹೇಳುತ್ತೇನೆ ಎಂದು ಟಾಂಗ್ ನೀಡಿದರು.