ಕರ್ನಾಟಕ

karnataka

ETV Bharat / state

ದೇವೇಗೌಡರೊಂದಿಗೆ ಸಚಿವ ಡಿಕೆಶಿ ಸಭೆ: ಸರ್ಕಾರ ಉಳಿಸಲು ಕಾರ್ಯತಂತ್ರ - undefined

ಪತನದ ಭೀತಿಯಲ್ಲಿ ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್​-ಜೆಡಿಎಸ್​ ನಾಯಕರು ಕಸರತ್ತು ನಡೆಸಿದ್ದಾರೆ. ಈ ಮಧ್ಯೆ ಸಚಿವ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ ಹೆಚ್‌.ಡಿ. ದೇವೇಗೌಡರೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಈ ವೇಳೆ ಮುಂದಿನ ಕಾರ್ಯತಂತ್ರ ಹೆಣೆಯುತ್ತಿದ್ದಾರೆ.

ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ನಿವಾಸದಲ್ಲಿ ಸಭೆ

By

Published : Jul 7, 2019, 1:18 PM IST

ಬೆಂಗಳೂರು: ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್‌.ಡಿ. ದೇವೇಗೌಡರ ನಿವಾಸದಲ್ಲಿ ಸಭೆ ನಡೆಯುತ್ತಿದ್ದು, ಸಚಿವ ಡಿ.ಕೆ. ಶಿವಕುಮಾರ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಜೆಡಿಎಸ್ ವರಿಷ್ಠ ಹೆಚ್‌.ಡಿ. ದೇವೇಗೌಡ ಅವರೊಂದಿಗೆ ಸಚಿವ ಡಿಕೆಶಿ ಸಭೆ

ಅತೃಪ್ತ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಪತನದ ಭೀತಿ ಎದುರಿಸುತ್ತಿದೆ. ಈ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಸಚಿವ ಡಿಕೆಶಿ ಮುಂದಿನ‌ ನಡೆ ಮತ್ತು ಕಾಂಗ್ರೆಸ್​ನ ಕಾರ್ಯತಂತ್ರ ಬಗ್ಗೆ ದೊಡ್ಡಗೌಡರ ಜೊತೆ ಚರ್ಚೆ ನಡೆಸುತ್ತಿದ್ದಾರೆ.

ಪದ್ಮನಾಭನಗರದಲ್ಲಿನ ದೇವೇಗೌಡ ಅವರ ನಿವಾಸದಲ್ಲಿ ಹೆಚ್.ಡಿ. ರೇವಣ್ಣ, ಡಿಸಿ ತಮ್ಮಣ್ಣ, ಹೆಚ್.ಕೆ. ಕುಮಾರಸ್ವಾಮಿ, ಕುಪೇಂದ್ರ ರೆಡ್ಡಿ, ಕೋನಾರೆಡ್ಡಿ, ಟಿ.ಎ. ಶರವಣ ಸೇರಿದಂತೆ ಹಲವು ಜೆಡಿಎಸ್ ನಾಯಕರು ಆಗಮಿಸಿದ್ದು, ಕ್ಷಿಪ್ರ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಅತೃಪ್ತರಿಗೆ‌ ಸಚಿವ ಸ್ಥಾನ ನೀಡುವ ಬಗ್ಗೆ ಸಚಿವ ಡಿಕೆಶಿಯವರು ದೇವೇಗೌಡರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

For All Latest Updates

TAGGED:

ABOUT THE AUTHOR

...view details