ಕರ್ನಾಟಕ

karnataka

ETV Bharat / state

ಹೆಚ್ ಡಿ ಕುಮಾರಸ್ವಾಮಿ ಇಷ್ಟು ಬೇಗ ಮೈಪರಿಚಿಕೊಳ್ಳುವ ಕೆಲಸ ಮಾಡಬಾರದು.. ಅವರು ತಾಳ್ಮೆಯಿಂದ ಇದ್ದರೆ ಒಳ್ಳೆಯದು: ಸಚಿವ ದಿನೇಶ್ ಗುಂಡೂರಾವ್ - ವೈಎಸ್​ಟಿ ತೆರಿಗೆ

ಕುಮಾರಸ್ವಾಮಿ ತಾಳ್ಮೆಯಿಂದ ಇದ್ದರೆ ಒಳ್ಳೆಯದು. ನಾವು ಯಾವ ರೀತಿ ಕೆಲಸ ಮಾಡುತ್ತೇವೆ ಎಂದು ಸ್ವಲ್ಪ ದಿನ ಕಾದು ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

minister-dinesh-gundurao-reaction-on-h-d-kumaraswamy-statement
ಹೆಚ್​.ಡಿ ಕುಮಾರಸ್ವಾಮಿ ಇಷ್ಟು ಬೇಗ ಮೈಪರಚುವ ಕೆಲಸ ಮಾಡಬಾರದು: ದಿನೇಶ್ ಗುಂಡೂರಾವ್

By

Published : Jul 3, 2023, 3:47 PM IST

Updated : Jul 3, 2023, 5:27 PM IST

ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಇಷ್ಟು ಬೇಗ ಮೈಪರಿಚಿಕೊಳ್ಳುವ ಕೆಲಸ ಮಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೆಚ್​ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೆಚ್​ಡಿಕೆ ಅವರು ಮಾಡಿರುವ ವೈಎಸ್​ಟಿ ತೆರಿಗೆ ಆರೋಪ ಬಗ್ಗೆ ಪ್ರತಿಕ್ರಿಯಿಸಿ, ನೇರವಾಗಿ ದೊಡ್ಡ ಪ್ರಮಾಣದಲ್ಲಿ ಜನರ ಖಾತೆಗೆ ಹಣ ಹಾಕುತ್ತಿದ್ದೇವೆ. ಅದರಲ್ಲಿ ಒಂದು ರೂಪಾಯಿ ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ಅವರಿಗೆ ಹೇಗಾದರು ಮಾಡಿ ಟೀಕೆ ಮಾಡಬೇಕು ಅಂತ ಹೀಗೆ ಮಾಡುತ್ತಿದ್ದಾರೆ. ಇದು ಆಧಾರರಹಿತ ಆರೋಪ ಎಂದರು.

ನಾವು ಸ್ಪಷ್ಟವಾದ ಹೆಜ್ಜೆ ಇಡುತ್ತಿದ್ದೇವೆ.‌ ಒಳ್ಳೆಯ ಆಡಳಿತ ಕೊಡುತ್ತೇವೆ. ಜನರಿಗೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸುಧಾರಣೆ ಆಗುತ್ತಿದೆ. ಉತ್ತಮ ವ್ಯವಸ್ಥೆ ನಿರ್ಮಾಣ ಆಗಿದೆ. ಜನಪರ ಆಡಳಿತ ಕೊಡಲು ಆದ್ಯತೆ ನೀಡುತ್ತಿದ್ದೇವೆ. ಕುಮಾರಸ್ವಾಮಿ ತಾಳ್ಮೆಯಿಂದ ಇದ್ದರೆ ಒಳ್ಳೆಯದು. ನಾವು ಯಾವ ರೀತಿ ಕೆಲಸ ಮಾಡುತ್ತೇವೆ ಎಂದು ಸ್ವಲ್ಪ ದಿನ ಕಾದು ನೋಡಬೇಕು. ಇಷ್ಟು ಬೇಗನೆ ಅವರು ಎಲ್ಲೋ ಒಂದು ಕಡೆ ಮೈಪರಚುವ ಕೆಲಸ ಮಾಡಬಾರದು ಎಂದು ಹೇಳಿದರು.

ಕೊರೊನಾ ವೇಳೆ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ತನಿಖೆ ಬಗ್ಗೆ ಪ್ರತಿಕ್ರಿಯಿಸಿ, ಆ ಸಂಬಂಧ ಸಾಕಷ್ಟು ಮಾಹಿತಿ ಕಲೆ ಹಾಕಿದ್ದೇವೆ. ಯಾವ ರೀತಿ ತನಿಖೆ ಮಾಡಬೇಕು ಎಂಬ ಬಗ್ಗೆ ಪರಿಶೀಲಿಸುತ್ತಿದ್ದೇವೆ.‌ ಸಮಿತಿ ಮಾಡಿ ತನಿಖೆ ಮಾಡಬೇಕಾ ಎಂಬ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದರು.

ಹೆಚ್​ಡಿಕೆ ಆರೋಪವನ್ನು ಖಂಡಿಸುತ್ತೇನೆ:ಮಾಜಿ ಸಿಎಂ ಕುಮಾರಸ್ವಾಮಿ ವೈಎಸ್​ಟಿ ಆರೋಪವನ್ನು ಖಂಡಿಸುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಕೊಡುತ್ತಿರುವ ಹೇಳಿಕೆಯಲ್ಲಿ ಯಾವುದೇ ರೀತಿಯ ಸತ್ಯಾಂಶ ಇಲ್ಲ. ಅದನ್ನು ನಾನು ಖಂಡಿಸುತ್ತೇನೆ ಎಂದರು.

ಹಾಸನದ ಸಕಲೇಶಪುರದಲ್ಲಿ ಅರಣ್ಯ ಒತ್ತುವರಿ ಮಾಡಲಾಗಿದ್ದು, ಅದನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದೆ. ಅಧಿಕಾರಿಗಳು ಒತ್ತುವರಿ ತೆರವು ಮಾಡಿ, ಅರಣ್ಯ ಇಲಾಖೆಯ ಸುಪರ್ದಿಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಎಲ್ಲಿ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೋ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. ಎಷ್ಟೇ ದೊಡ್ಡ ಜನ ಆಗಲಿ ಯಾರು ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:ರಾಜ್ಯ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಿಳಿದ ಶಿಕ್ಷಕರು, ರೈತರು: ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ಮತ್ತೊಂದೆಡೆ, ಹೆಚ್​ಡಿಕೆ ಗಾಳಿಯಲ್ಲಿ ಗುಂಡು ಹೊಡಿಯೋದು, ಅದಕ್ಕೆ ಈಗ 19 ಸ್ಥಾನಕ್ಕೆ ಇಳಿದಿದ್ದಾರೆ ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಟೀಕಿಸಿದ್ದಾರೆ. ವಿಧಾನಸೌಧದಲ್ಲಿ ಹೆಚ್​ಡಿಕೆಯವರ ವೈಎಸ್​ಟಿ ತೆರಿಗೆ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರು ಎರಡು ಬಾರಿ ಸಿಎಂ ಆಗಿದ್ದವರು. ಸಿಎಂ ಆಗಿದ್ದಾಗ ಇಲಾಖೆ ಯಾವ ರೀತಿ ನಡೆಸಿದರು ಎಂದು ಗೊತ್ತಿದೆ. ಸಿಎಂ ಸುಪುತ್ರ ಯಾವುದರಲ್ಲೂ ಹಸ್ತಕ್ಷೇಪ ಮಾಡಿಲ್ಲ.‌ ಆಧಾರ ರಹಿತ ಆರೋಪ ಮಾಡಿದ್ದಾರೆ. ಅದಕ್ಕೆ ಅವರ ಪಕ್ಷ 19 ಸ್ಥಾನಕ್ಕೆ ಇಳಿದಿದೆ. ಜನ ಮುಂದೆಯೂ ಅವರಿಗೆ ಪಾಠ ಕಲಿಸ್ತಾರೆ ಎಂದು ತಿರುಗೇಟು ನೀಡಿದರು.

Last Updated : Jul 3, 2023, 5:27 PM IST

ABOUT THE AUTHOR

...view details