ಬೆಂಗಳೂರು :ಮೂರು-ನಾಲ್ಕು ತಿಂಗಳಲ್ಲಿ ವೈದ್ಯರ ಕೊರತೆ ನೀಗಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯ ವೇಳೆ ಸರ್ಕಾರದ ಗಮನ ಸೆಳೆದ ಜೆಡಿಎಸ್ ಶಾಸಕ ಎ ಟಿ ರಾಮಸ್ವಾಮಿ, ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆ ಇದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಎದುರಾಗುತ್ತದೆ. ಹೀಗಾಗಿ, ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಡಾ.ಕೆ.ಸುಧಾಕರ್, ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ಇರುವುದನ್ನು ಒಪ್ಪುತ್ತೇನೆ. ಅನೇಕ ವರ್ಷಗಳಿಂದ ಈ ಕೊರತೆ ಇದೆ. ಹಿಂದಿನ ಸರ್ಕಾರಗಳು ಇದಕ್ಕೆ ಒತ್ತು ಕೊಡದ ಕಾರಣ ಈ ಕೊರತೆ ಎದುರಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಹೋಗಲು ಹಲವು ವೈದ್ಯರು ಹಿಂಜರಿಯುತ್ತಿದ್ದಾರೆ ಎಂದು ತಿಳಿಸಿದರು.