ಕರ್ನಾಟಕ

karnataka

ETV Bharat / state

ಲಾಕ್‌ಡೌನ್, ಸೆಮಿ ಲಾಕ್‌ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಸಚಿವ ಸುಧಾಕರ್ - Minister Dr. K. Sudhakar reaction

ರಾಜ್ಯದಲ್ಲಿ ಒಂದು ವಾರ ಕಾಲ ಕಾದು ನೋಡುತ್ತೇವೆ. ಪರಿಸ್ಥಿತಿ ಗಮನಿಸಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಕೋವಿಡ್​ ಮಾರ್ಗಸೂಚಿ ಬದಲಾವಣೆ ಮಾಡುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.

Minister Dr. K. Sudhakar
ಸಚಿವ ಡಾ.ಕೆ.ಸುಧಾಕರ್

By

Published : Mar 22, 2021, 4:10 PM IST

ಬೆಂಗಳೂರು: ರಾಜ್ಯದಲ್ಲಿ ಲಾಕ್​​ಡೌನ್, ಸೆಮಿ ಲಾಕ್​​ಡೌನ್​ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲವೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ

ವಿಧಾನಸೌಧದಲ್ಲಿ ಲಾಕ್​ಡೌನ್, ಸೆಮಿ ಲಾಕ್​ಡೌನ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆ ತರಹದ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಆದರೂ ರಾಜ್ಯದಲ್ಲಿ ಒಂದು ವಾರ ಕಾಲ ಕಾದು ನೋಡುತ್ತೇವೆ. ಪರಿಸ್ಥಿತಿ ಗಮನಿಸಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಮಾರ್ಗಸೂಚಿ ಬದಲಾವಣೆ ಮಾಡುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ವ್ಯಾಕ್ಸಿನ್ ವೇಸ್ಟ್ ಆಗುತ್ತಿಲ್ಲ. ಅದಕ್ಕೆ ಅವಕಾಶವೂ ಇಲ್ಲ. ಖಾಸಗಿಯವರೂ ಹಿರಿಯ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನ್ ಕೊಡುವ ವಿಷಯದಲ್ಲಿ ಅವರೊಂದಿಗೆ ಚರ್ಚಿಸಲಾಗುತ್ತದೆ ಎಂದರು.

ಓದಿ:ಮತ್ತೆ ಲಾಕ್​​​​ಡೌನ್​ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ : ಸಚಿವ ಬೊಮ್ಮಾಯಿ

ABOUT THE AUTHOR

...view details