ಬೆಂಗಳೂರು: ಯಾದಗಿರಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರಾಷ್ಟ್ರೀಯ ಆರೋಗ್ಯ ಆಯೋಗದ (NMC) ಅನುಮತಿ ದೊರೆತಿದ್ದು, ಇದೇ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳಿಗೆ ಪ್ರವೇಶಾತಿ ಪ್ರಾರಂಭವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಯಾದಗಿರಿ ಮೆಡಿಕಲ್ ಕಾಲೇಜು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಿದ್ದು, ಈ ಭಾಗದ ಆರೋಗ್ಯ ಮೂಲ ಸೌಕರ್ಯದಲ್ಲಿ ಗಣನೀಯ ಸುಧಾರಣೆ ತರಲಿದೆ. ಯಾದಗಿರಿ ಜನತೆಯ ಬಹುದಿನಗಳ ಕನಸು ನನಸಾಗಿಸಲು ಕಾರಣೀಭೂತರಾದ ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟ್ವೀಟ್ ಮೂಲಕ ಯಾದಗಿರಿ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಅದೇ ರೀತಿ ಹಾವೇರಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮುಂಬರುವ 2022 - 23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದೆ.