ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖವಾಡ ಕಳಚಿದೆ: ಸಚಿವ ಸುಧಾಕರ್ - ಡಿಜೆ ಹಳ್ಳಿ ಠಾಣೆ ಹಾಗೂ ಕೆ.ಜಿ ಹಳ್ಳಿ ಪ್ರಕರಣ
ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮತ್ತೆ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್
ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದಿದ್ದ ಗಲಭೆಯಲ್ಲಿ ಕ್ರೌರ್ಯದ ಮನಸ್ಥಿತಿಯ ದ್ಯೋತಕವಾಗಿ ಪುಂಡಾಟಿಕೆ ಮೆರೆದಿದ್ದ ಬಿಬಿಎಂಪಿ ಸದಸ್ಯೆ ಪತಿ ಕಲೀಂ ಪಾಷರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೀಚಕರ ಹಡೆಮುರಿಕಟ್ಟುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಕಾಂಗ್ರೆಸ್‌ನವರಿಗೆ ಈಗಲಾದ್ರೂ ನಿಜ ಸತ್ಯದ ಅರಿವಾಯಿತೇ ಎಂದು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.