ಬೆಂಗಳೂರು:ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜನರ ಆರೋಗ್ಯ ಮತ್ತು ಮಕ್ಕಳ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಲಾಗಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಿರಂತರ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟ್ ಮತ್ತು ನಂದಿನಿ ಕನ್ನಡ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಹಾಗೂ ನಂದಿನಿ ಕನ್ನಡ ಯುವಕರ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ಇಂಡಿಯನ್ ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಭಾನುವಾರ ನಡೆದ ಆರೋಗ್ಯ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಪ್ರತಿ ತಿಂಗಳು ಆರೋಗ್ಯ ತಪಾಸಣೆ ಶಿಬಿರ:ಕ್ಷೇತ್ರದ ಜನರ ಉತ್ತಮ ಆರೋಗ್ಯಕ್ಕಾಗಿ ಪ್ರತಿ ತಿಂಗಳು ಎರಡು ಬಾರಿ ಆರೋಗ್ಯ ಉಚಿತ ತಪಾಸಣೆ ಶಿಬಿರಗಳನ್ನು ಆಯೋಜಿಸಲಾಗುವುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರಿಗೆ ಬೇರೆ ಆಸ್ಪತ್ರೆಯಲ್ಲಿಅನುಕೂಲ ಮಾಡಿಕೊಡಲಾಗುತ್ತಿದೆ. ಇದೀಗ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ ಇರುವ ನೂತನ ಸರ್ಕಾರಿ ಸೂಪರ್ ಸ್ಪೆಷಾಲಿಟಿ ಹೆರಿಗೆ ಆಸ್ಪತ್ರೆ ಶೀಘ್ರ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದರು.