ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್, ಜೆ.ಸಿ.ನಗರ, ಹಾಗೂ ಪರಿಮಳ ನಗರ ಸೇರಿದಂತೆ, ಹಲವು ಏರಿಯಾಗಳಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ, ಹಲವು ಮನೆಗಳು ಜಲಾವೃತವಾಗಿದ್ದು, ನಿವಾಸಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಗೋಪಾಲಯ್ಯ - ಸಚಿವ ಗೋಪಾಲಯ್ಯ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ
ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ಹಲವು ಏರಿಯಾಗಳ ಮನೆಗಳು ಜಲಾವೃತಗೊಂಡಿದ್ದು, ಮಂಗಳವಾರ ಈ ಪ್ರದೇಶಗಳಿಗೆ ಸಚಿವ ಗೋಪಾಲಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿದ ಸಚಿವರು
ಈ ವಿಷಯ ತಿಳಿದ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಬಿಬಿಎಂಪಿ ಅಧಿಕಾರಿಗಳ ಜೊತೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಲ್ಲದೆ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ಅಲ್ಲಿನ ನಿವಾಸಿಗಳಿಗೆ ಸಾಂತ್ವನ ಹೇಳಿ, ಬಿಬಿಎಂಪಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
ಈ ವೇಳೆ ನಂದಿನಿ ಲೇಔಟ್ ಬಿಬಿಎಂಪಿ ಸದಸ್ಯರಾದ. ಕೆ.ವಿ.ರಾಜೇಂದ್ರಕುಮಾರ್, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಉಪಾಧ್ಯಕ್ಷ ಜಯರಾಮಯ್ಯ, ಬಿಜೆಪಿ ಮುಖಂಡರಾದ ಗಂಗ ಹನುಮಯ್ಯ ಸೇರಿದಂತೆ ಬಿಬಿಎಂಪಿಯ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದರು.