ಬೆಂಗಳೂರು:ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ಯಾವಾಗ, ಏನು ಮಾಡಬೇಕು? ಎನ್ನುವುದು ಸಿಎಂ ಬಸವರಾಜ ಬೊಮ್ಮಾಯಿ ಅವರ ವಿವೇಚನೆಗೆ ಬಿಟ್ಟದ್ದಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಆರ್.ಟಿ ನಗರದಲ್ಲಿರುವ ಸಿಎಂ ಖಾಸಗಿ ನಿವಾಸಕ್ಕೆ ಇಂದು ಸಚಿವ ಕಾರಜೋಳ ಭೇಟಿ ನೀಡಿದರು. ಮುಖ್ಯಮಂತ್ರಿಗಳ ಜತೆ ಅಂತಾರಾಜ್ಯ ಜಲವ್ಯಾಜ್ಯಗಳ ಕುರಿತು ಸಮಾಲೋಚನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಹೈಕಮಾಂಡ್ ಜೊತೆ ಚರ್ಚೆ ನಡೆಸಿ ಯಾವಾಗ ವಿಸ್ತರಣೆ, ಪುನಾರಚನೆ ಮಾಡಬೇಕು ಎಂದು ಸಿಎಂ ತೀರ್ಮಾನ ಮಾಡುತ್ತಾರೆ ಎಂದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ